ಬಳ್ಳಾರಿ

ವರ್ಷದೊಳಗೆ ಕುಡಿಯುವ ನೀರು

Published On :

ಹಗರಿಬೊಮ್ಮನಹಳ್ಳಿ: ವರ್ಷದೊಳಗೆ ತಾಲೂಕಿನ ಕೋಗಳಿ ಕಂದಾಯ ಹೋಬಳಿ ವ್ಯಾಪ್ತಿಯ ಗ್ರಾಮಗಳಿಗೆ ತುಂಗಭದ್ರಾ ನದಿಯಿಂದ ಕುಡಿಯುವ ನೀರು ಪೂರೈಸುವ ಯೋಜನೆಯನ್ನು ಜಾರಿಗೊಳಿಸಿ, ಆ ಮೂಲಕ ಫ್ಲೋರೈಡ್ ಸಮಸ್ಯೆಯಿಂದ ಈ ಗ್ರಾಮಗಳ ಜನತೆಯನ್ನು ಮುಕ್ತಗೊಳಿಸಲು ಶ್ರಮಿಸುವುದಾಗಿ ಶಾಸಕ ಎಸ್. ಭೀಮಾನಾಯ್ಕ ಭರವಸೆ ನೀಡಿದರು.
ತಾಲೂಕಿನ ಕೋಗಳಿ ಗ್ರಾಮದಲ್ಲಿ ಭಾನುವಾರ ಸಂಜೆ ಜರುಗಿದ ನಲ್ಲಿ ನೀರು ಸರಬಾರಾಜು ಯೋಜನೆಗೆ ಭೂಮಿಪೂಜೆ ನೇರವೇರಿಸಿ ಮಾತನಾಡಿದ ಅವರು, ತಾಲೂಕಿನ ಬಸರಕೋಡು ಗ್ರಾಮದ ಬಳಿ ತುಂಗಭದ್ರಾ ನದಿಯಿಂದ ಕೋಗಳಿ ಹೋಬಳಿ ವ್ಯಾಪ್ತಿಯ ಸುಮಾರು 30ಕ್ಕೂ ಹೆಚ್ಚು ಗ್ರಾಮಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆ ಸಿದ್ಧಪಡಿಸಿ, ಸರ್ಕಾರಕ್ಕೆ ಸಲ್ಲಿಸಲಾಗಿದೆ. ಶೀಘ್ರದಲ್ಲೇ ಯೋಜನೆಗೆ ಸರ್ಕಾರ ಅಂಗೀಕಾರ ನೀಡಲಿದೆ ಎಂದರು. ಈ ಬಾರಿ ಬೇಸಿಗೆಯಲ್ಲಿ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಳ್ಳದಂತೆ ನಿಗಾವಹಿಸಬೇಕೆಂದು ಕಾರ್ಯಕ್ರಮದಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕೋಗಳಿ ಹೋಬಳಿ ವ್ಯಾಪ್ತಿಯಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ, ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲಾಗುವುದು ಎಂದರು.
ಜಿಪಂ ಸದಸ್ಯರಾದ ಕರಿಬಸವನಗೌಡ್ರ ರತ್ನಮ್ಮ, ರೋಗಾಣಿ ಹುಲುಗಪ್ಪ, ಮಾಜಿ ಸದಸ್ಯ ಅಕ್ಕಿ ತೋಟೇಶ, ತಾಪಂ ಸದಸ್ಯ ಉಪ್ಪಾರ ಬಾಲಪ್ಪ, ಹೂಗಾರ ಮಲ್ಲಣ್ಣ, ಜೆಡಿಎಸ್ ಅಧ್ಯಕ್ಷ ವೈ. ಮಲ್ಲಿಕಾರ್ಜುನ, ತಾಪಂ ಇಒ ಬಿ.ಎಂ.ಎಸ್. ವೀರಯ್ಯ, ಪಂರಾಇ ಎಇಇ ಆರ್. ಪ್ರಭು, ಸಹಾಯಕ ತೋಟಗಾರಿಕಾ ನಿರ್ದೇಶಕ ಪರಮೇಶ್ವರಪ್ಪ ಸೇರಿದಂತೆ ಹಲವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.