ಮಡೆಸ್ನಾನ ವಿರೋಧಿಸಿ 8ರಂದು ಪ್ರತಿಭಟನೆ: ಪ್ರಸನ್ನಕುಮಾರ್
ಹಗರಿಬೊಮ್ಮನಹಳ್ಳಿ: ಮಡೆಸ್ನಾನ ವಿರೋಧಿಸಿ ಡಿ. 8ರಂದು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಿಪಿಐ (ಎಂ) ಪಕ್ಷದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಪಿಐ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಎಸ್. ಪ್ರಸನ್ನಕುಮಾರ್ ತಿಳಿಸಿದರು.
ಪಟ್ಟಣದ ಗುರುಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮಡೆಸ್ನಾನ ಅನಾಗರಿಕ ಪದ್ಧತಿಯಾಗಿದ್ದು, ಈ ಆಚರಣೆ ವಿರುದ್ಧ ಜನತೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಡಿ. 8ರಂದು ಪ್ರತಿಭಟನೆ ಮಾಡಲಾಗುತ್ತಿದೆ. ಆ ದಿನ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಬ್ರಹ್ಮಣ್ಯ ದೇವಸ್ಥಾನಗಳಿರುವ ರಾಜ್ಯದ ಇತರೆ ಪ್ರದೇಶದಲ್ಲೂ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ ಎಂದರು.
ಮನುಷ್ಯ ವಿರೋಧಿಯಾಗಿರುವ ಇಂತಹ ಆಚರಣೆಗೆ ಬಿಜೆಪಿ, ಆರ್ಎಸ್ಎಸ್, ವಿಶ್ವಹಿಂದೂ ಪರಿಷತ್ ಸೇರಿದಂತೆ ಹಲವು ಕೋಮುವಾದಿ ಸಂಘಟನೆಗಳು, ಎಂಜಲು ಎಲೆ ಮೇಲೆ ಉರುಳಿದರೆ ಚರ್ಮರೋಗ ವಾಸಿಯಾಗುತ್ತದೆ ಎಂಬ ಅವೈಜ್ಞಾನಿಕ ವಾದ ತಳಕು ಹಾಕುವ ಕೆಲಸದಲ್ಲಿ ನಿರತವಾಗಿವೆ ಎಂದು ಆರೋಪಿಸಿದರು.
ರಾಜಕೀಯ ಬೇಡ: ಮೂಢನಂಬಿಕೆ ಆಚರಣೆ ನಿರ್ಬಂಧಿಸುವ ಕಾಯ್ದೆಜಾರಿ ಅಗತ್ಯವಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಇಂತಹ ಕಾಯ್ದೆ ಜಾರಿ ವಿಚಾರ ಹರಿಯ ಬಿಡುವ ಬದಲು ಕಾಯ್ದೆ ಜಾರಿ ಸಂಬಂಧ ಕಾಂಗ್ರೆಸ್ ಬದ್ಧತೆ ಪ್ರದರ್ಶಿಸುವುದು ಒಳಿತು ಎಂದರು.
ಹಕ್ಕು ಮೊಟಕು: ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ (ಎಸ್ಮಾ)ಯನ್ನು ರಾಜ್ಯದಲ್ಲಿ ಜಾರಿಗೊಳಿಸಲು ಮುಂದಾಗುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದ ಕಾರ್ಮಿಕ ವರ್ಗದ ಪಾಲಿಗೆ ಭಸ್ಮಾಸುರನಾಗಲು ಹೊರಟಿದೆ. ಅತ್ಯಂತ ಕರಾಳ ಕಾನೂನಿನ ಮೂಲಕ ಮಾನವ ಹಕ್ಕುಗಳ ಉಲ್ಲಂಘನೆಗೆ ಸರ್ಕಾರ ಮುಂದಾಗಿದೆ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ಸಂವಿಧಾನಬದ್ಧ ಮುಷ್ಕರದ ಹಕ್ಕನ್ನೆ ಮೊಟಕುಗೊಳಿಸಲು ಮುಂದಾಗಿರುವುದು ಸಂವಿಧಾನ ವಿರೋಧಿಯೇ ಸರಿ. ಈ ಸಂಬಂಧ ಶೀಘ್ರದಲ್ಲೇ ರಾಜ್ಯದ ಎಲ್ಲ ಎಡ ಪಕ್ಷಗಳು, ಪ್ರಗತಿಪರ ಸಂಘಟನೆಗಳ ಸಭೆ ಕರೆದು ಚಳವಳಿ ರೂಪಿಸಲು ಪಕ್ಷ ನಿರ್ಧರಿಸಿದೆ ಎಂದು ತಿಳಿಸಿದರು.
ಆರ್.ಎಸ್.ಬಸವರಾಜ, ರಂಗಪ್ಪ ದಾಸರ್, ಎಸ್. ಜಗನ್ನಾಥ, ಹುರಕಡ್ಲಿ ಶಿವಕುಮಾರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

