ಬಳ್ಳಾರಿ

ಅಪರಾಧ ತಡೆಗೆ ಕೈ ಜೋಡಿಸಿ: ಕೃಷ್ಣನಾಯ್ಕ

Published On :

ಕೂಡ್ಲಿಗಿ: ಸಮಾಜದಲ್ಲಿ ಅಪರಾಧಗಳನ್ನು ತಡೆಯಲು ಪೊಲೀಸ್ ಇಲಾಖೆಗೆ  ಸಾರ್ವಜನಿಕರ ಸಹಕಾರ ದೊರೆತಲ್ಲಿ ಅಪರಾಧಗಳನ್ನು ಮಟ್ಟ ಹಾಕಲು ಸಹಕಾರಿ ಎಂದು ಕೂಡ್ಲಿಗಿ ಪಿಎಸ್‌ಐ ಕೃಷ್ಣನಾಯ್ಕ ತಿಳಿಸಿದರು.
ಅವರು ಪಟ್ಟಣದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಮಂಗಳವಾರ ನಡೆದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿ ಗ್ರಾಮಗಳಲ್ಲಿ ಯಾವುದೇ ಅನುಮಾನಾಸ್ಪದ ವ್ಯಕ್ತಿ ಕಂಡುಬಂದಲ್ಲಿ ಹತ್ತಿರದ ಠಾಣೆಗೆ ಮಾಹಿತಿ ನೀಡಬೇಕು. ಯಾವುದೇ ಸಂದರ್ಭದಲ್ಲಿ ಕುಟುಂಬ ಸಮೇತ ವಾರಗಟ್ಟಲೆ ಮನೆಗೆ ಬೀಗಹಾಕಿ ಹೋಗುವಾಗ ಹತ್ತಿರದ ಠಾಣೆಗೆ ಮಾಹಿತಿ ನೀಡಬೇಕು. ಮಹಿಳೆಯರು ಸೇರಿ ಎಲ್ಲರೂ ರಾತ್ರಿ ಸಮಯದಲ್ಲಿ ಹೆಚ್ಚಾಗಿ ಬಂಗಾರದ ಒಡವೆಗಳನ್ನು ಧರಿಸಿ ಒಂಟಿಯಾಗಿ ಓಡಾಡಬಾರದು ಎಂದು ಸಾರ್ವಜನಿಕರಿಗೆ ಕಿವಿಮಾತು ಹೇಳಿದರು.
ಪೊಲೀಸ್ ಸಿಬ್ಬಂದಿಗಳಾದ ಕೆ. ಬಸವರಾಜ್, ಕೊಟ್ರೇಶ್, ಎಂ. ರಾಜೇಶ್, ಉಪ ಪ್ರಾಚಾರ್ಯ ಮಾರಪ್ಪ, ಶಿಕ್ಷಕರಾದ ವಿಶ್ವನಾಥ, ಪ್ರಶಾಂತ, ರಾಜೀವ್, ಜಗದೀಶ್ವರಿ, ಗುರುವಣ್ಣ, ವಾಗೀಶ್ ಇತರರಿದ್ದರು. ಇದಕ್ಕೂ ಮುನ್ನ ಅಪರಾಧ ತಡೆ ಜಾಗೃತಿ ಜಾಥಾಕ್ಕೆ ಡಿವೈಎಸ್ಪಿ ಪಿ.ಡಿ. ಗಜಕೋಶ್ ಚಾಲನೆ ನೀಡಿದರು. ಜಾಥಾದಲ್ಲಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.