ವಿಕಲಚೇತನರು ಮಾದರಿಯಾಗಲಿ: ಮಲ್ಲಪ್ಪ
ಹೊಸಪೇಟೆ: ವಿಕಲಚೇತನರು ಸಮಾಜದಲ್ಲಿನ ಉತ್ತಮ ಅವಕಾಶಗಳನ್ನು ಬಳಸಿಕೊಳ್ಳುವ ಮೂಲಕ ಉತ್ತಮ ಜೀವನ ರೂಪಿಸಿಕೊಂಡು ಇತರರಿಗೆ ಮಾದರಿ ವ್ಯಕ್ತಿಗಳಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಎಂದು ನಗರಸಭಾ ಸದಸ್ಯ ಮಲ್ಲಪ್ಪ ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿಯಿಂದ ಸರ್ದಾರ್ ಪಾಟೇಲ್ ಪ್ರೌಢಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿಶ್ವ ಅಂಗವಿಕಲರ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂಗವಿಕಲತೆ ಶಾಪವಲ್ಲ, ಅದು ಆಕಸ್ಮಿಕ ಘಟನೆಯಾಗಿದ್ದು, ವಿಕಲಚೇತನರಿಗೆ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಲು ಉತ್ತಮ ಶಿಕ್ಷಣ ನೀಡುವ ಮೂಲಕ ವಿಕಲಚೇತರನ್ನು ಸ್ವಾವಲಂಬಿ ಜೀವನ ಸಾಗಿಸಲು ಮುಂದಾಗಬೇಕು ಎಂದು ಅಶೋಕ್ ಜೀರೆ ಹೇಳಿದರು. ಕ್ಷೇತ್ರ ಸಮನ್ವಯಾಧಿಕಾರಿ ಶರಣಪ್ಪ ವಟಗಲ್ ಮಾತನಾಡಿ, ವಿಕಲಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ಒದಗಿಸಿದೆ. ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅಭಿವೃದ್ಧಿ ಹೊಂದಲು ಮುಂದಾಗಬೇಕು ಎಂದರು. ವಾತ್ಸಲ್ಯ ಟ್ರಸ್ಟ್ನ ಸಂಸ್ಥಾಪಕ ನಿರ್ದೇಶಕ ಸುರೇಶ ಕುಷ್ಟಗಿ ವಿಶೇಷ ಉಪನ್ಯಾಸ ನೀಡಿದರು. ಸುಭದ್ರಮ್ಮ ಮತ್ತು ಶಿವಶಂಕರ್ ಅವರನ್ನು ಸನ್ಮಾನಿಸಲಾಯಿತು. ದಸ್ತಗಿರಿಸಾಬ್ ಮತ್ತು ಶರಣಬಸವ ವಠಾರ ಪ್ರಾರ್ಥಿಸಿದರು. ಶಿವಶಂಕರ್ ಸ್ವಾಗತಿಸಿದರು. ಹನುಮಂತಪ್ಪ ವಂದಿಸಿದರು. ಕೆ. ಬಸವರಾಜ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

