ಬಳ್ಳಾರಿ

ನೇಮಕಾತಿಗೆ ಅರ್ಜಿ

Published On :

ಬಳ್ಳಾರಿ: ರಾಜ್ಯದ ಸಿಆರ್‌ಪಿಎಫ್ ಕಾನ್ಸ್‌ಟೆಬಲ್ ಹುದ್ದೆ (ಟ್ರೇಡ್ಸ್‌ಮೆನ್, ಟೆಕ್ನಿಕಲ್)ಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಹ ಪುರುಷ, ಮಹಿಳೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಜ. 2014ರಲ್ಲಿ ನೇಮಕಾತಿ ನಡೆಯಲಿದ್ದು, ಒಟ್ಟು 129 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಡಿ. 23ರೊಳಗಾಗಿ ಡೆಪ್ಯೂಟಿ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಅವರ ಕಚೇರಿ, ಗ್ರೂಪ್ ಸೆಂಟರ್, ಸಿಆರ್‌ಪಿಎಫ್, ಯಲಹಂಕ, ಬೆಂಗಳೂರು- 64 ಇವರಿಗೆ ಸಲ್ಲಿಸಬೇಕು ಎಂದು ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
14ರಿಂದ ತರಬೇತಿ
ಬಳ್ಳಾರಿ: ಬಾಗಲಕೋಟೆಯ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರವು ಕುರಿ, ಆಡು ಮತ್ತು ಹೈನುಗಾರಿಕೆ ಬಗ್ಗೆ ತರಬೇತಿ ನೀಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳು ಡಿ. 14ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಆರ್. ಹಿರೇಮಠ ತಿಳಿಸಿದ್ದಾರೆ. ಶಿಬಿರದಲ್ಲಿ ಅಧಿಕ ಆದಾಯಕ್ಕಾಗಿ ಅನುಸರಿಸಬೇಕಾದ ಆಧುನಿಕ ಪದ್ಧತಿಗಳು, ಹಣಕಾಸಿನ ನಿರ್ವಹಣೆ ಮತ್ತಿತರ ವಿಷಯಗಳ ಬಗ್ಗೆ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸುವವರಿಗೆ ಉಚಿತ ಊಟ ಹಾಗೂ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಆಸಕ್ತ ರೈತರು, ರೈತ ಮಹಿಳೆಯರು, ಸ್ವ ಸಹಾಯ ಸಂಘದ ಸದಸ್ಯರು, ಯುವಕರು ತಮ್ಮ ಹೆಸರು, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ ಮತ್ತಿತರ ವಿವರಗಳನ್ನು ಡಿ. 14ರೊಳಗಾಗಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿವಿವಿ ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋಟ- 587103 ಕಚೇರಿಯನ್ನು ಅಥವಾ ದೂ.ಸಂ-08354-244028, 244048, ಮೊ.ಸಂ-9164446886ನ್ನು ಸಂಪರ್ಕಿಸಬಹುದೆಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.