ಪುನರ್ವಸತಿ: ದೇವದಾಸಿಯರ ಧರಣಿ
ಹಗರಿಬೊಮ್ಮನಹಳ್ಳಿ: ಕೇಂದ್ರ ಸರ್ಕಾರ ಚಳಿಗಾಲದ ಅಧಿವೇಶನದಲ್ಲೇ ದೇವದಾಸಿ ಮಹಿಳೆಯರಿಗೆ ಮತ್ತು ಅವರ ಮಕ್ಕಳಿಗೆ ಪುನರ್ವಸತಿ ಕಲ್ಪಿಸುವ ಯೋಜನೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ತಾಲೂಕು ಸಮಿತಿ ಕಾರ್ಯಕರ್ತರು ಗುರುವಾರ ತಹಸೀಲ್ದಾರ್ ಕಚೇರಿ ಎದುರು ಧರಣಿ ನಡೆಸಿದರು.
ಧರಣಿ ನಿರತರನ್ನುದ್ದೇಶಿಸಿ ಸಂಘದ ರಾಜ್ಯಾಧ್ಯಕ್ಷೆ ಬಿ. ಮಾಳಮ್ಮ ಮಾತನಾಡಿ, ದೇವದಾಸಿಯಂತಹ ಅನಿಷ್ಠ ಪದ್ಧತಿಗೆ ಸಿಕ್ಕಿಹಾಕಿಕೊಂಡಿರುವ ಮಹಿಳೆಯರು ಇವತ್ತು ಸಾಮಾಜಿಕವಾಗಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಆರೋಗ್ಯವಾಗಿಯೂ ಆನೇಕ ಕೆಟ್ಟ ಪರಿಣಾಮಗಳಿಂದ ನರಳುತ್ತಿದ್ದಾರೆ. ಇಂತಹ ಕುಟುಂಬಗಳಿಗೆ ಪುನರ್ವಸತಿ ಕಲ್ಪಿಸಿಕೊಟ್ಟು ಅವರ ಬದುಕಿಗೆ ಆಸರೆಯಾಗಬೇಕಾಗಿದ್ದ ಕೇಂದ್ರ- ರಾಜ್ಯ ಸರ್ಕಾರಗಳು, ತಮ್ಮ ಹೊಣೆ ಮರೆತಿವೆ. ಸರ್ಕಾರದ ಈ ನಿರ್ಲಕ್ಷ್ಯವನ್ನು ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು.
ಪ್ರಸಕ್ತ ಚಳಿಗಾಲದ ಅಧಿವೇಶನದಲ್ಲೇ ದೇವದಾಸಿಯರು, ಅವರ ಮಕ್ಕಳಿಗೆ ಪುನರ್ವಸತಿ ಕಲ್ಪಿಸುವ ಯೋಜನೆಯನ್ನು ಜಾರಿಗೆ ತರಬೇಕು. ಮಾಸಿಕ ರು. 1500 ಸಹಾಯಧನ ನೀಡುವ ಕ್ರಮವನ್ನು ಕೇಂದ್ರ ಸರ್ಕಾರ ಅನುಮೋದಿಸಿ, ಜಾರಿಗೆ ತರಬೇಕೆಂದರು ಒತ್ತಾಯಿಸಿದರು.
ಸಂಘದ ತಾಲೂಕಾಧ್ಯಕ್ಷೆ ಎಚ್.ಬಿ. ಮೈಲಮ್ಮ, ಉಪಾಧ್ಯಕ್ಷೆ ಎ. ಹನುಮಕ್ಕ, ಎಂ. ತಟ್ನೆಮ್ಮ, ಸಹ ಕಾರ್ಯದರ್ಶಿ ಅಂಜಿನಮ್ಮ, ಎಚ್.ಬಿ. ಗೀತಾ, ಸರೋಜಾ, ಮಂಜುಳಾ, ಜಿ.ಆರ್. ಮಲ್ಲಮ್ಮ, ಪ್ರಾಂತ ರೈತ ಸಂಘದ ಅಧ್ಯಕ್ಷ ಕೊಟಗಿ ಮಲ್ಲಿಕಾರ್ಜುನ, ಸಿ. ಹನುಮಂತಪ್ಪ, ಡಿವೈಎಫ್ಐ ಮುಖಂಡ ಓ. ತಿಂದಪ್ಪ, ಕಮ್ಮಾರ ಬಸವರಾಜ ಹಲವರು ಧರಣಿಯಲ್ಲಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

