ಸ್ವಾವಲಂಬಿ ವಿಕಲಚೇತನರಿಗೆ ಸಹಕಾರ ನೀಡಿ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಡಿ. 5
ಸ್ವಾವಲಂಬಿಗಳಾಗಿ ಜೀವಿಸುವ ವಿಕಲಚೇತನರಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು 3ನೇ ಅಪರ ಜಿಲ್ಲಾ ನ್ಯಾಯಾಧೀಶ ಶಿವಣ್ಣ ಹೇಳಿದರು.
ನಗರದ ಎಂ.ಪಿ. ಪ್ರಕಾಶ ಕಲಾಮಂದಿರದಲ್ಲಿ ಅಂಗವಿಕಲರ ದಿನಾಚರಣೆ ಹಾಗೂ ಅಂಗವಿಕಲರ ಪಾಲಕರ 4ನೇ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ವಿಕಲಚೇತನರಿಗೆ ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ಒದಗಿಸಿದ್ದು, ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಉನ್ನತಿ ಸಾಧಿಸುವ ಮೂಲಕ ಮಾದರಿ ವ್ಯಕ್ತಿಗಳಾಗಿ ಗುರುತಿಸಿಕೊಳ್ಳಬೇಕು ಎಂದರು.
ವಿಕಲಚೇತನರಿಗೆ ಸರ್ಕಾರ ಶಿಕ್ಷಣ, ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ ಹಾಗೂ ಸೌಲಭ್ಯ ನೀಡುತ್ತಿದ್ದು, ಅನೇಕ ವಿಕಲಚೇತನರು ತಮ್ಮ ಪ್ರತಿಭೆ ಪ್ರದರ್ಶಿಸುವ ಮೂಲಕ ಸಾಧಿಸಿ ತೋರಿಸಿದ್ದಾರೆ. ಸಾಧನೆಗೆ ಮಾನಸಿಕ ಸದೃಢತೆ ಮುಖ್ಯವಾಗಿರುತ್ತದೆ. ವಿಕಲಚೇತನರು ಸೌಲಭ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ವಿಳಂಬ ಮಾಡಬಾರದು ಎಂದು ತಿಳಿಸಿದರು.
ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಕೆ. ನಾರಾಯಣ ಪ್ರಸಾದ್ ಮಾತನಾಡಿ, ಸರ್ಕಾರದ ಯೋಜನೆಗಳನ್ನು ಅಧಿಕಾರಿಗಳು ಕೇವಲ ಕಡತಗಳಿಗೆ ಸೀಮಿತವಾಗಿಸದೇ ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಮುಂದಾಗಬೇಕು ಎಂದರು.
ವಿಕಲಚೇತನರ ಸಂಘದ ಅಧ್ಯಕ್ಷ ಜಿ. ಮುಕ್ಕಣ್ಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ತಾಯಮ್ಮ ಶಕ್ತಿ ಸಂಘದ ಅಧ್ಯಕ್ಷೆ ಕವಿತಾ ಈಶ್ವರ್ಸಿಂಗ್, ವಿಕಲಚೇತನರಿಗೆ ತ್ರಿಚಕ್ರ ವಾಹನ ಮತ್ತು ಇಬ್ಬರು ವಿಕಲಚೇತನ ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶ ಪತ್ತಿಕಾಳು ಪ್ರಭುಸಿದ್ದಪ್ಪ, ವಕೀಲರ ಸಂಘದ ಅಧ್ಯಕ್ಷ ಕೆ. ರತ್ನಾಕರರಾವ್, ಕಾರ್ಯದರ್ಶಿ ಕೊಟ್ರೇಶ್ ಹಿರೇಮಠ, ಡಿವೈಎಸ್ಪಿ ಡಿ.ಡಿ. ಮಾಳಿಗಿ, ಪಿ. ವೆಂಕಟೇಶ್, ಎನ್. ವೆಂಕಟೇಶ್, ಹುಲುಗಪ್ಪ, ಶಮೀನಾ ಕೌಸರ್ ಸೇರಿದಂತೆ ಇತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

