ಬಳ್ಳಾರಿ

ಎಸ್ಮಾ ಅಂಗೀಕಾರ: ಯುಟಿಯುಸಿ ಖಂಡನೆ

Published On :

ಬಳ್ಳಾರಿ: ಸರ್ಕಾರಿ ನೌಕರರ ಮುಷ್ಕರದ ಹಕ್ಕನ್ನು ಕಿತ್ತುಕೊಳ್ಳುವ ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ಮಸೂದೆ (ಎಸ್ಮಾ)ಯನ್ನು ಬೆಳಗಾವಿ ಅಧಿವೇಶನದಲ್ಲಿ ಅಂಗೀಕರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ರಾಜ್ಯ ಕಾರ್ಯದರ್ಶಿ ಕೆ. ಸೋಮಶೇಖರ್, ಕಾಯ್ದೆ ಪ್ರಕಾರ ನೀರು, ವಿದ್ಯುತ್, ಸಾರಿಗೆ ಮುಂತಾದ ಅತ್ಯಾವಶ್ಯಕ ಸೇವೆಗಳಲ್ಲಿ ತೊಡಗಿರುವ ಸಿಬ್ಬಂದಿ ನೌಕರರು ಯಾವುದೇ ಹೋರಾಟ, ಮುಷ್ಕರ ನಡೆಸುವಂತಿಲ್ಲ. ಒಂದು ವೇಳೆ ನಡೆಸಿದರೆ, ಮುಖಂಡರನ್ನು, ನೌಕರರನ್ನು ಯಾವುದೇ ಮುನ್ಸೂಚನೆ ನೀಡದೆ ಬಂಧಿಸಬಹುದು. ಅಲ್ಲದೆ, ಜೈಲು ಶಿಕ್ಷೆ, ರು. 5 ಸಾವಿರ ದಂಡ ವಿಧಿಸಬಹುದಾಗಿದೆ. ನೌಕರರ ಬೇಡಿಕೆಗಳನ್ನು ಪರಿಹರಿಸಲು ಮುಂದಾಗದೆ ನಿರ್ಲಕ್ಷಿಸಿದಾಗ ಮಾತ್ರ ಆಡಳಿತ ಮಂಡಳಿಗಳು, ಮಾಲೀಕರು, ಆಳುವ ವರ್ಗಗಳ ವಿರುದ್ಧ ಅನಿವಾರ್ಯವಾಗಿ ಹೋರಾಟ ಹಮ್ಮಿಕೊಳ್ಳುವರು. ಆದರೆ, ಅದಕ್ಕೂ ಕಡಿವಾಣ ಹಾಕಲು ಮುಂದಾಗುತ್ತಿರುವುದು ಕಾರ್ಮಿಕ ವಿರೋಧಿ ಲಕ್ಷಣವನ್ನು ಎತ್ತಿ ತೋರಿಸಿದಂತಾಗಿದೆ. ಆದ್ದರಿಂದ ಕೂಡಲೇ ರಾಜ್ಯ ಸರ್ಕಾರ ಈ ಕಾಯ್ದೆಯನ್ನು ಹಿಂತೆಗೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ಸೋಮಶೇಖರ್ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.