ಬಳ್ಳಾರಿ

ಕೊಂಡಯ್ಯನವರ ಮೇಲಿನ ಆರೋಪದಲ್ಲಿ ಹುರುಳಿಲ್ಲ

Published On :

ಹೂವಿನಹಡಗಲಿ: ಮಾಜಿ ಸಂಸದ ಕೆ.ಸಿ. ಕೊಂಡಯ್ಯ ನಿವೇಶನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕೆಲ ಕಾಂಗ್ರೆಸ್ ಮುಖಂಡರು ವಿನಾಕಾರಣ ಆರೋಪ ಮಾಡುತ್ತಿರುವುದನ್ನು ತಾಲೂಕು ನೇಕಾರರ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಮಾದಿಹಳ್ಳಿ ಸಿದ್ದೇಶ ಉತ್ತಂಗಿ ಹೇಳಿದರು.
ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೊಂಡಯ್ಯನವರು ಕಳೆದ 20 ವರ್ಷಗಳಿಂದ ಕಳಂಕರಹಿತವಾಗಿ ಆಡಳಿತ ನಡೆಸಿದ್ದಾರೆ. ನಿವೇಶನ ದುರ್ಬಳಕೆ ಕುರಿತು ಅದೇ ಪಕ್ಷದ ಮುಖಂಡರು ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದರು.
ಬಳ್ಳಾರಿಯಲ್ಲಿ ಟ್ರಸ್ಟ್‌ವೊಂದಕ್ಕೆ ನಿವೇಶನವನ್ನು ನಿಯಮಾವಳಿ ಮೂಲಕವೇ ಸರ್ಕಾರ ಮಂಜೂರು ಮಾಡಿದೆ. ಇದನ್ನೇ ಹಗರಣದ ರೀತಿ ಬಿಂಬಿಸಿ ನೇಕಾರರ ಸಂಘದ ಹಿರಿಯ ನಾಯಕನನ್ನು ಅವಮಾನ ಮಾಡುತ್ತಿದ್ದಾರೆ. ಸಾಮಾಜಿಕವಾಗಿ, ಆರ್ಥಿಕವಾಗಿ ರಾಜಕೀಯವಾಗಿ ಹಿಂದುಳಿದಿರುವ ನೇಕಾರರ ಸಮುದಾಯದ ಮುಖಂಡರಿಗೆ ಆಗಿರುವ ಅನ್ಯಾಯ ಹಾಗೂ ಚಾರಿತ್ರ್ಯವಧೆ ಖಂಡಿಸಿ 9ರಂದು ನೇಕಾರರ ಒಕ್ಕೂಟ ಬಳ್ಳಾರಿಯಲ್ಲಿ ಬೃಹತ್ ರ್ಯಾಲಿ ಹಮ್ಮಿಕೊಂಡಿದೆ. ನಮ್ಮ ಸಮುದಾಯದ ನಾಯಕರ ಮೇಲೆ ಸುಳ್ಳು ಆರೋಪ ಮಾಡಿರುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಕೋಗಳಿ ವೀರಭದ್ರಪ್ಪ, ಕಾರ್ಯದರ್ಶಿ ಸುರೇಶ ಕೊಳ್ಳಿ, ಮುಖಂಡರಾದ ಎಸ್. ಮುದುಕಪ್ಪ, ಟಿ. ಗಂಗಾಧರ, ಬಸವರಾಜ, ಈಶಪ್ಪ, ಜಲ್ಲಿ ನಾಗಭೂಷಣ, ಕೆ. ರಾಮಚಂದ್ರಪ್ಪ, ಬೆಂಡಿಗೇರಿ ವೀರೇಶ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.