ಬಳ್ಳಾರಿ

ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ

Published On :

ಕೂಡ್ಲಿಗಿ: ದೇವದಾಸಿಯಂಥ ಅನಿಷ್ಟ ಪದ್ಧತಿಯಿಂದ ಸಾಕಷ್ಟು ಮಹಿಳೆಯರಿಗೆ ಅಭದ್ರತೆ ಕಾಡುತ್ತಿದೆ. ಸ್ವಂತಕ್ಕೆ ಸೂರಿಲ್ಲ ಪರಿಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದು, ಅನಾರೋಗ್ಯದಿಂದ ಬಳಲುವ ಮಹಿಳೆಯರಿಗೆ ಸರ್ಕಾರ ಹೆಚ್ಚಿನ ನೆರವು ನೀಡಬೇಕೆಂದು ದೇವದಾಸಿ ಸಂಘದ ಅಧ್ಯಕ್ಷೆ ಕನಿಕೇರಿ ವೆಂಕಮ್ಮ ಅಭಿಪ್ರಾಯಪಟ್ಟರು.
ಪಟ್ಟಣದಲ್ಲಿ ತಾಲೂಕು ದೇವದಾಸಿಯರ ವಿಮೋಚನಾ ಸಂಘದ ನೇತೃತ್ವದಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದರು. ದೇವದಾಸಿ ಪದ್ಧತಿ ನಿರ್ಮೂಲನೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಅನೇಕ ಮಹಿಳೆಯರು ಸ್ವ ಉದ್ಯೋಗದತ್ತ ಮುಖ ಮಾಡಿದ್ದಾರೆ. ಆದರೆ, ಅವರಿಗೆ ಸರ್ಕಾರ ಹೆಚ್ಚಿನ ಸೌಲಭ್ಯ ನೀಡುವಲ್ಲಿ ವಿಫಲವಾಗಿದೆ ಎಂದು ಹೇಳಿದರು.
ದೇವದಾಸಿಯರು ಮತ್ತು ಮಕ್ಕಳ ಪುನರ್ವಸತಿಗಾಗಿ ಮಾಸಿಕ ರು. 1500 ನೀಡಬೇಕು. ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯನ್ನು ಬಲಗೊಳಿಸಬೇಕು. ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಬೇಕು. ದೇವದಾಸಿ, ದಲಿತ, ಬುಡಕಟ್ಟು ಜನಾಂಗದವರಿಗೆ ಕನಿಷ್ಠ ಎರಡು ಎಕರೆ ಜಮೀನು ನೀಡಬೇಕು. ಬಿಗಿಯಾದ ಮೌಢ್ಯಾಚರಣೆ ಪ್ರತಿಬಂಧ ಕಾಯ್ದೆಯನ್ನು ಜಾರಿಗೆ ತರುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ಕಾರ್ರ್ಯಕ್ರಮಕ್ಕೂ ಮುಂಚೆ ಗಾಂಧೀಜಿ ಚಿತಾಭಸ್ಮ ಹುತಾತ್ಮರ ಸ್ಮಾರಕದಿಂದ ಘೋಷಣೆ ಕೂಗುತ್ತ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಗೌರವಾಧ್ಯಕ್ಷೆ ಉಜ್ಜಿನಿ ಗೌರಮ್ಮ, ಉಪಾಧ್ಯಕ್ಷ ಮೊರಬ ಜಿ. ಕೃಷ್ಣಮೂರ್ತಿ, ಕಾರ್ಯದರ್ಶಿ ಗುಜ್ಜಲಾರ ದೊಡ್ಡೀರಮ್ಮ, ಸೊಲ್ಲಮ್ಮ, ಶಿವಪುರ ದುರುಗಮ್ಮ, ಹುಲಿಗೆಮ್ಮ, ಕೆ.ಕೆ. ಹಟ್ಟಿ ಹನುಮಂತಪ್ಪ ಮತ್ತಿತರರಿದ್ದರು.
ತಹಸೀಲ್ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.