ಮೈಕ್ ಆಪರೇಟ್ಗೆ ವಿದ್ಯಾರ್ಥಿಗಳ ಬಳಕೆ
ಹೊಸಪೇಟೆ: ಹಂಪಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಸಚಿವರು ಸೇರಿದಂತೆ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಮೈಕ್ನ ಅವಶ್ಯಕತೆ ಇರುತ್ತದೆ. ಅದಕ್ಕಾಗಿ ಬಾಡಿಗೆ ಮೈಕ್ ತರಿಸದೆ, ಯಾವುದೋ ಒಂದು ಸರ್ಕಾರಿ ಶಾಲೆಯ ಮೈಕ್ನ್ನು ತರಿಸಿ, ಆ ಮೈಕ್ನ್ನು ಅದೇ ಶಾಲಾ ವಿದ್ಯಾರ್ಥಿಗಳಿಂದ ಆಪ್ರೇಟ್ ಮಾಡಿಸಿದ ಘಟನೆ ಸೋಮವಾರ ನಡೆಯಿತು. ಅದು ಮೂವರು ಪ್ರಮುಖ ಸಚಿವರಿದ್ದ ಸಭೆಯಲ್ಲಿ.
ಪ್ರವಾಸೋದ್ಯಮ ಸಚಿವ ಆರ್.ವಿ. ದೇಶಪಾಂಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರೇಮೇಶ್ವರ ನಾಯ್ಕ ಅವರಿದ್ದ ಸಭೆಯಲ್ಲಿ ಈ ಘಟನೆ ಜರುಗಿತು. ಸಭೆಯಲ್ಲಿ ಬಳ್ಳಾರಿ ಜಿಪಂ ಅಧ್ಯಕ್ಷೆ ಶೋಭಾ ಬೆಂಡಿಗೇರಿ, ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಮತ್ತು ಸ್ಥಳೀಯ ಅಧಿಕಾರಿಗಳು ಇದ್ದರು. ಇವರ ಮುಂದೆ ಆ ಇಬ್ಬರು ವಿದ್ಯಾರ್ಥಿಗಳು ಶಾಲೆಯಲ್ಲಿ ನಡೆಯುವ ಪಾಠಗಳನ್ನು ಕೇಳುವುದನ್ನು ಬಿಟ್ಟು ಸಭೆಯಲ್ಲಿ ಮೈಕ್ಸೆಟ್ ಸಿದ್ಧತೆ ಮಾಡಿಕೊಡುವುದರಲ್ಲೇ ನಿರತರಾಗಿದ್ದರು. ಆದರೆ ಆ ವಿದ್ಯಾರ್ಥಿಗಳನ್ನು ಯಾಕೆ ಈ ಕೆಲಸಕ್ಕೆ ಬಳಸಿದ್ದೀರಿ ಎಂದು ಯಾವ ಸಚಿವರು ಹಾಗೂ ಅಧಿಕಾರಿಗಳು ಸ್ಥಳೀಯ ಅಧಿಕಾರಿಗಳನ್ನು ಪ್ರಶ್ನಿಸಲಿಲ್ಲ. ಎಲ್ಲಾ ಅಧಿಕಾರಿಗಳು ಜಾಣ ಕುರುಡರಾಗಿ ಇದ್ದದ್ದು ಆಶ್ಚರ್ಯ ಮೂಡಿಸಿತು.
ಸ್ಥಳೀಯರಿಲ್ಲ: ಹಂಪಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಸಚಿವರಾದ ಆರ್.ವಿ. ದೇಶಪಾಂಡೆ, ಉಮಾಶ್ರೀ ಹಾಗೂ ಪಿ.ಟಿ. ಪರಮೇಶ್ವರ ನಾಯ್ಕ ಅವರು ಮಾತ್ರ ಭಾಗವಹಿಸಿದ್ದರು. ಆದರೆ ಜಿಲ್ಲೆಯ ಸಂಸದರು, ಉಳಿದ ಯಾವ ಶಾಸಕರು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸದಿರುವುದು ಕಂಡುಬಂತು. ಆದರೆ ಸ್ಥಳೀಯ ಕಾಂಗ್ರೆಸ್ ಮುಖಂಡ ಅಬ್ದುಲ್ ವಹಾಬ್ ಮಾತ್ರ ಸಚಿವರೊಂದಿಗೆ ಸಾಲಿನಲ್ಲಿ ಕುಳಿತು ಸಭೆಯಲ್ಲಿ ಅಧಿಕಾರಿಗಳಿಗೆ ಮುಜುಗರ ಆಗುವಂತೆ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

