ಬಳ್ಳಾರಿ

ಆಕಸ್ಮಿಕ ಬೆಂಕಿ ತಗುಲಿ ಸಿಲಿಂಡರ್ ಸ್ಫೋಟ

Published On :

ಕಂಪ್ಲಿ: ಕಂಪ್ಲಿ- ಗಂಗಾವತಿ ಬೈಪಾಸ್ ರಸ್ತೆಯಲ್ಲಿನ ಹೋಟೆಲ್‌ನಲ್ಲಿ ಆಕಸ್ಮಿಕ ಬೆಂಕಿ ತಗುಲಿ, ಗ್ಯಾಸ್ ಸಿಲಿಂಡರ್‌ವೊಂದು ಸ್ಫೋಟವಾದ ಘಟನೆ ಸೋಮವಾರ ಜರುಗಿದೆ. ಫಕ್ರುದ್ದೀನ್ ಎಂಬಾತನ ನ್ಯೂ ಸ್ಟಾರ್ ಹೊಟೇಲ್‌ನಲ್ಲಿ ಸೋಮವಾರ ಬೆಳಗಿನ ಜಾವ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಅನಂತರ ಅದು ವ್ಯಾಪಕವಾಗಿ ಹರಡಿ ಗ್ಯಾಸ್ ಸಿಲಿಂಡರ್ ಸಿಡಿದಿದೆ. ಬೆಂಕಿಗೆ ಎರಡು ಫ್ರಿಜ್, ಕೂಲ್ ಡ್ರಿಂಕ್ಸ್, ವಾಟರ್ ಬಾಟಲ್‌ಗಳು, ಆಹಾರ ಪದಾರ್ಥ, ಪ್ಲಾಸ್ಟಿಕ್ ಚೇರ್‌ಗಳು ಸುಟ್ಟಿದ್ದು, ಮೇಲ್ಛಾವಣಿಗೆ ಹಾಕಿದ ತಗಡಿನ ಶೀಟ್‌ಗಳು ಜಖಂಗೊಂಡಿವೆ.
ಸುಮಾರು ರು. 2 ಲಕ್ಷ ನಷ್ಟವಾಗಿರಬಹುದೆಂದು ಅಂದಾಜಿಸಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪಕ್ಕದ ಗುಜರಿ ಅಂಗಡಿಗೂ ಬೆಂಕಿ ತಗುಲಿದ್ದು, ಕೆಲ ಸಾಮಾನುಗಳು ಬೆಂಕಿಗೆ ಆಹುತಿಯಾಗಿವೆ. ಪಿಎಸ್‌ಐ ಡಿ. ಹುಲುಗಪ್ಪ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.