ಬಳ್ಳಾರಿ

ಸಾಲಬಾಧೆ: ಕೂಡ್ಲಿಗಿ ರೈತ ನೇಣಿಗೆ ಶರಣು

Published On :

ಕೂಡ್ಲಿಗಿ: ತಾಲೂಕಿನ ನೆಲಬೊಮ್ಮನಹಳ್ಳಿ ಗ್ರಾಮದ ರೈತ ನಾಗೇಂದ್ರಪ್ಪ (38) ಸಾಲಬಾಧೆ ತಾಳಲಾರದೇ ಮಂಗಳವಾರ ಮಧ್ಯಾಹ್ನ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬ್ಯಾಂಕ್ ಹಾಗೂ ಕೈ ಸಾಲ ಸೇರಿದಂತೆ ಲಕ್ಷಾಂತರ ರುಪಾಯಿ ಸಾಲ ಮಾಡಿದ್ದ ನಾಗೇಂದ್ರಪ್ಪಗೆ, ಈ ಬಾರಿ ಜಮೀನಿನ ಫಸಲು ಕೈ ಸೇರಿರಲಿಲ್ಲ. ಹೀಗಾಗಿ ಜಿಗುಪ್ಸೆಗೊಂಡು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ ಎಂದು ಎಎಸ್‌ಐ ನಾಗರಾಜ್ ತಿಳಿಸಿದ್ದಾರೆ. ಚಿಕ್ಕಜೋಗಿಹಳ್ಳಿ ಗ್ರಾಮದ ಎಸ್‌ಬಿಎಂನಲ್ಲಿ ಲಕ್ಷಾಂತರ ಸಾಲ ತೆಗೆದುಕೊಂಡಿದ್ದೇನೆ, ಜನರ ಹತ್ತಿರ ಕೈಗಡ ಸಾಲ ತೆಗೆದುಕೊಂಡಿದ್ದಲ್ಲದೇ ಕೆಲವರಿಗೆ ಬೇರೆಯವರಿಂದ ಸಾಲ ಕೊಡಿಸಿದ್ದೇನೆ. ನನ್ನ ಜಮೀನು ನೆಲಸಮ ಮಾಡಿ ಈ ಬಾರಿ ಬೆಳೆ ಬೆಳದರೂ ಸಾಲ ತೀರಿಸಲಾಗಲಿಲ್ಲ. ಹೀಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಡೆತ್‌ನೋಟ್ ಬರೆದಿಟ್ಟು ನೇಣು ಹಾಕಿಕೊಂಡಿದ್ದಾನೆ. ಮೃತನಿಗೆ ಮೂವರು ಮಕ್ಕಳಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.