ಅಪರಿಚಿತರು ಮನೆ ಪ್ರವೇಶಿಸಲು ಬಿಡಬೇಡಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಡಿ. 11
ನಾಗರಿಕರು ತಮ್ಮ ಮನೆಗೆ ಬಂದ ಅಪರಿಚಿತರಿಗೆ ಪ್ರವೇಶ ನೀಡಬೇಡಿ ಎಂದು ಬಳ್ಳಾರಿ ಗ್ರಾಮೀಣ ಉಪವಿಭಾಗದ ಡಿವೈಎಸ್‌ಪಿ ರುದ್ರಮುನಿ ಮನವಿ ಮಾಡಿದರು.
ಪೊಲೀಸ್ ಇಲಾಖೆಯು ತಾಲೂಕಿನ ಮೋಕಾ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕರ ಸೇವಕರು, ವಿದ್ಯುಚ್ಛಕ್ತಿ ಮಂಡಳಿಯವರು, ದೂರವಾಣಿ ಕೇಂದ್ರದವರೆಂದು ಮನೆಯೊಳಗೆ ಪ್ರವೇಶ ನೀಡುವವರ ಗುರುತಿನ ಚೀಟಿಯನ್ನು ಪರೀಕ್ಷಿಸಬೇಕು. ಅಪರಿಚಿತರು ದೇವರ ತೀರ್ಥ ಅಥವಾ ಪ್ರಸಾದ ಇನ್ನಿತರ ವಸ್ತುಗಳನ್ನು ಕೊಟ್ಟಲ್ಲಿ ಅದನ್ನು ಮುಟ್ಟಬಾರದು. ತಮ್ಮ ಮನೆಯ ನೆರೆಹೊರೆಯವರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕೆಂದು ತಿಳಿಸಿದರು.
ಚಿನ್ನದ ವ್ಯಾಪಾರಿಗಳು ವ್ಯಾಪಾರ ಮುಗಿದ ಮೇಲೆ ಒಡವೆಗಳನ್ನು ಭದ್ರವಾದ ತಿಜೋರಿಯಲ್ಲಿಟ್ಟು ಜೋಪಾನ ಮಾಡಬೇಕು. ಮತ್ತಿತರ ವ್ಯಾಪಾರ ವಹಿವಾಟು ಮಾಡುವವರು ತಮ್ಮ ವ್ಯಾಪಾರ ಮುಗಿದ ಮೇಲೆ ಹಣವನ್ನು ಅಂಗಡಿಯಲ್ಲಿಡಬಾರದು. ತಾವು ಧರಿಸಿದ ಆಭರಣಗಳನ್ನು ಸುರಕ್ಷಿತವಲ್ಲದ ಸ್ಥಳಗಳಲ್ಲಿ ತಮ್ಮ ಸೀರೆ ಅಥವಾ ಉಡುಪಿನ ಸಹಾಯದಿಂದ ಮುಚ್ಚಿಕೊಳ್ಳಬೇಕು. ಒಂದು ವೇಳೆ ಸರಗಳ್ಳರು ಅಥವಾ ಇತರೆ ದಾಳಿಗೆ ಬಲಿಯಾದಲ್ಲಿ ಕೂಡಲೇ ಪೊಲೀಸ್ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 100ಗೆ ಕರೆ ಮಾಡಿ ತಿಳಿಸಬೇಕು ಎಂದರು.
ಕಾಲೇಜಿನ ಪ್ರಾಚಾರ್ಯ ಕೃಷ್ಣಪ್ಪ, ಪೊಲೀಸ್ ಸಿಬ್ಬಂದಿ, ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.
ಮೋಕಾ ಪೊಲೀಸ್ ಠಾಣೆಯ ಪಿಎಸ್‌ಐ ಸಿ. ಶಿವನಂಜ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕಿ ಸ್ವಪ್ನಾ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

