ಪಿಂಚಣಿ ನಿಧಿ ನಿರ್ವಹಣೆ, ಅಭಿವೃದ್ಧಿ ಕಾಯ್ದೆ ಹಿಂಪಡೆಯಲು ಒತ್ತಾಯ
ಹಗರಿಬೊಮ್ಮನಹಳ್ಳಿ: ಕೇಂದ್ರ ಸರ್ಕಾರ ಅಂಗೀಕರಿಸಿರುವ ಪಿಂಚಣಿ ನಿಧಿ ನಿರ್ವಹಣೆ ಹಾಗೂ ಅಭಿವೃದ್ಧಿ ಕಾಯಿದೆಯನ್ನು ಹಿಂದಕ್ಕೆ ಪಡೆಯಲು ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟವು ಡಿ. 12 ರಂದು ಪಾರ್ಲಿಮೆಂಟ್ ಭವನದ ಮುಂದೆ ಪ್ರತಿಭಟನೆ ನಡೆಸಲಿದೆ ಎಂದು ಒಕ್ಕೂಟದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ರಂಗನಾಥ ಹವಾಲ್ದಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಿಂಚಣಿ ಖಾಸಗೀಕರಣ ಕಾಯ್ದೆ ಅತ್ಯಂತ ಅಪಾಯಕಾರಿಯಾಗಿದ್ದು, ನೌಕರರ ನಿವೃತ್ತಿಯ ಬದುಕಿನೊಂದಿಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿರುವ ಅವರು, ದೇಶದ ಎಲ್ಲ ನೌಕರರಿಗೂ ಈ ಮೊದಲಿನ ನಿಗದಿತ ಪಿಂಚಣಿ ಪದ್ದತಿಯನ್ನೇ ಮುಂದುವರಿಸಬೇಕು. ಕೇಂದ್ರ ಸರ್ಕಾರಿ ನೌಕರರಿಗೆ ಸಿಗುವ ಸಂಬಳ, ಇತರೆ ಸೌಲಭ್ಯಗಳನ್ನು ಇತರೆ ಎಲ್ಲ ರಾಜ್ಯ ಸರ್ಕಾರಿ ನೌಕರರಿಗೂ ಕೊಡಬೇಕು. ಬೆಲೆ ಏರಿಕೆ ನಿಯಂತ್ರಿಸಬೇಕು, ಖಾಲಿ ಇರುವ ಲಕ್ಷಾಂತರ ಹುದ್ದೆಗಳನ್ನು ಕಾಯಂ ಆಗಿ ಭರ್ತಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ವಿಧೇಯಕ 2009 ಅನ್ನು ಹಿಂಪಡೆದು, ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ ವಿಧೇಯಕ 2013 ಅನ್ನು ಜಾರಿಗೊಳಿಸಲು ಮುಂದಾಗಿದೆ. ಕಾರ್ಮಿಕರಿಗೆ ಮತ್ತು ನೌಕರರಿಗೆ ಮುಷ್ಕರ ಕೊನೆಯ ಅಸ್ತ್ರ. ಈ ಅಸ್ತ್ರವನ್ನು ಬಳಸುವ ಮೊದಲೇ ಬ್ರಹ್ಮಾಸ್ತ್ರ ಪ್ರಯೋಗಿಸಲು ಹೊರಟಿರುವುದು ನಾಚಿಕೆಗೇಡಿನ ವಿಷಯ ಎಂದು ಒಕ್ಕೂಟ ಅಭಿಪ್ರಾಯಿಸಿದೆ ಎಸ್ಮಾ ಕಾಯ್ದೆಯನ್ನು ಅನುಷ್ಠಾನಗೊಳಿಸದಂತೆ ಒಕ್ಕೂಟದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ಕೊರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

