ಬಳ್ಳಾರಿ

ಜ್ಯೇಷ್ಠತಾ ಪಟ್ಟಿ ಪ್ರಕಟ

Published On :

ಹೊಸಪೇಟೆ: ಹೊಸಪೇಟೆ ತಾಲೂಕಿನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಗ್ರೇಡ್- 2 ಹುದ್ದೆಗೆ ಬಡ್ತಿ ನೀಡಬೇಕಾಗಿರುವ ಸಂಬಂಧಪಟ್ಟ ಪದವೀಧರ ತರಬೇತಿ ಹೊಂದಿದ ಶಿಕ್ಷಕರ ಸೇವಾ ವಿವರವನ್ನು ದಿನಾಂಕ 1-1-2013ಕ್ಕೆ ಅನ್ವಯವಾಗುವಂತೆ ಜೇಷ್ಠತಾ ಪಟ್ಟಿಯನ್ನು ಬಿಇಒ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಸಂಬಂಧಪಟ್ಟ ಶಿಕ್ಷಕರು ತಮ್ಮ ಪದವಿ ಮತ್ತು ತರಬೇತಿಯ ಮೂಲ ಅಂಕಪಟ್ಟಿಯೊಂದಿಗೆ 2 ಝೆರಾಕ್ಸ್ ಸೆಟ್‌ಗಳೊಂದಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಡಿ. 13ರೊಳಗಾಗಿ ತಲುಪಿಸಲು ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸುನಂದಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಬಳ್ಳಾರಿ: ಹಗರಿಬೊಮ್ಮನಹಳ್ಳಿ ಶಿಶು ಅಭಿವೃದ್ಧಿ ಯೋಜನೆಯಡಿ ಬರುವ ಬಾಚಿಗೊಂಡನಹಳ್ಳಿ 2ನೇ ಕೇಂದ್ರದಲ್ಲಿ ಅಂಗನವಾಡಿ ಸಹಾಯಕಿ ಹುದ್ದೆ ಖಾಲಿಯಿದ್ದು, ಆಸಕ್ತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಸ್ಥಳೀಯರಾಗಿದ್ದು, ಆಸಕ್ತರು ತಮ್ಮ ಅರ್ಜಿಯನ್ನು ಜ. 6ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಗರಿಬೊಮ್ಮನಹಳ್ಳಿ ಇವರಿಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಹಗರಿಬೊಮ್ಮನಹಳ್ಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.
ಮಟ್ಕಾ: ರು. 44 ಸಾವಿರ ವಶ
ಬಳ್ಳಾರಿ: ಮಟ್ಕಾ ಜೂಜಾಟದ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ, ಇಬ್ಬರನ್ನು ಬಂಧಿಸಿ ರು. 44 ಸಾವಿರ ವಶಪಡಿಸಿಕೊಂಡಿದ್ದಾರೆ. ಬಸವೇಶ್ವರ ನಗರದಲ್ಲಿ ಬುಧವಾರ ಸಂಜೆ ಮಟ್ಕಾ ಆಡುತ್ತಿದ್ದಾಗ ಗಾಂಧಿನಗರ ಪಿಎಸ್‌ಐ ಚಂದನ್ ಗೋಪಾಲ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿ, ಆರ್. ಭರತ್ ಮತ್ತು ನಾರಾಯಣಿ ಎನ್ನುವವರನ್ನು ಬಂಧಿಸಿದ್ದಾರೆ. ಗಾಂಧಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಟ್ಕಾ: ಇಬ್ಬರ ಬಂಧನ
ಸಂಡೂರು: ಮಟ್ಕಾ ಜೂಜಾಟದ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿ, ರು. 18,735 ಹಾಗೂ ಎರಡು ಮೊಬೈಲ್ ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ತಾರಾನಗರದಲ್ಲಿ ನಡೆದಿದೆ. ಸಂಡೂರು ಪೊಲೀಸರು ದಾಳಿ ಮಾಡಿ, ಶಂಕರಪ್ಪ, ಟಿ. ಕಲ್ಪನಾ ಎಂಬುವವರನ್ನು ಬಂಧಿಸಿದ್ದಾರೆ. ಈ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.