ಬಳ್ಳಾರಿ

ಪಾರದರ್ಶಕ ವರ್ಗಾವಣೆಗೆ ಆದ್ಯತೆ

Published On :

ಕಂಪ್ಲಿ: ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ನಾನು ತಲೆ ಹಾಕಿಲ್ಲ. ಆದರೆ ಪಾರದರ್ಶಕ ವರ್ಗಾವಣೆಗೆ ಆದ್ಯತೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ತಿಳಿಸಿದರು.
ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಘಟನಾ ಸಭೆಯಲ್ಲಿ ಮಾತನಾಡಿದ ಅವರು, ಕಂಪ್ಲಿ ವಿಧಾನಸಭಾ ಕ್ಷೇತ್ರಕ್ಕೆ ಪ್ರತಿ 2 ತಿಂಗಳಿಗೊಮ್ಮೆ ಭೇಟಿ ನೀಡಿ, ಪ್ರಗತಿ ಪರಿಶೀಲನೆ ನಡೆಸಲಾಗುತ್ತದೆ. ಜನರ ಮೂಲ ಸಮಸ್ಯೆಗಳಿಗೆ ಸ್ಪಂದಿಸಿ, ಶೀಘ್ರ ಕ್ರಮಕ್ಕೆ ಮುಂದಾಗುವುದಾಗಿ ಹೇಳಿದರು.
ಮುಂದಿನ ತಿಂಗಳು ಕಂಪ್ಲಿ ಪಟ್ಟಣದಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ಕರೆದು ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುವುದು. ಪಟ್ಟಣಕ್ಕೆ ಶುದ್ಧ ಕುಡಿಯುವ ನೀರು ಪೂರೈಸುವ ಹಿನ್ನೆಲೆಯಲ್ಲಿ ಎಸಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ ಪರಿಶೀಲಿಸುವಂತೆ ಆದೇಶಿಸಲಾಗುವುದು. ಎಲ್‌ಎಲ್ ಹಾಗೂ ಎಚ್‌ಎಲ್ ಕಾಲುವೆಗಳಲ್ಲಿ ಪ್ರಸ್ತುತ ಹರಿಯುತ್ತಿರುವ ನೀರಿನ ಪ್ರಮಾಣವನ್ನು ಕಡಿಮೆ ಮಾಡಿ, ಮುಂದಿನ ಬೇಸಿಗೆ ದಿನಗಳಲ್ಲಿ ಅಗತ್ಯ ಪ್ರಮಾಣದ ನೀರು ಹರಿಸುವಂತೆ ನೀರಾವರಿ ಇಲಾಖೆ ಹಿರಿಯ ಅಧಿಕಾರಿಗಳಿಗೆ ಆದೇಶ ನೀಡಲಾಗುವುದು ಎಂದರು.
ಟೆಂಡರ್ ಕರೆಯಲಾಗಿದೆ: ಕಂಪ್ಲಿ ಸಮೀಪದ ಮೆಟ್ರಿ ಗ್ರಾಮದ 33 ಕೆವಿ ಸಬ್ ಸ್ಟೇಷನ್‌ನ್ನು ರೈತರ ಹಿತದೃಷ್ಟಿಯಿಂದ ರು. 12 ಕೋಟಿ ವೆಚ್ಚದಲ್ಲಿ 110 ಕೆವಿ ಸ್ಟೇಷನ್ ಆಗಿ ಮೇಲ್ದರ್ಜೆಗೇರಿಸಲು ಟೆಂಡರ್ ಕರೆಯಲಾಗಿದೆ. ಎಸ್‌ಎಫ್‌ಸಿ ಅನುದಾನ ರು. 4 ಕೋಟಿ ವೆಚ್ಚದಲ್ಲಿ ಕಂಪ್ಲಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಅನುಮೋದನೆ ನೀಡಲಾಗಿದೆ. 13ನೇ ಹಣಕಾಸು ಯೋಜನೆಯಡಿ ರು. 1.20 ಕೋಟಿಗಳ ವೆಚ್ಚದಲ್ಲಿ ರೂಪಿಸಿದ ಕ್ರಿಯಾಯೋಜನೆಯನ್ನು ಪರಿಶೀಲಿಸಿ ಮಂಜೂರಾತಿ ನೀಡಲಾಗಿದೆ. ಒಟ್ಟು ರು. 3.50 ಕೋಟಿ ವೆಚ್ಚದಲ್ಲಿ ರಸ್ತೆ ಸೇರಿ ಅಗತ್ಯ ಕಾಮಗಾರಿಗಳ ಟೆಂಡರ್ ಕರೆದು ಅಭಿವೃದ್ಧಿಪಡಿಸಲಾಗುವುದು. ಹೊಸಪೇಟೆ ತಾಲೂಕಿನ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗಾಗಿ ರು. 1.5 ಕೋಟಿ ಮಂಜೂರಾಗಿದ್ದು, ಚರ್ಚಿಸಿ ಆದ್ಯತೆ ಮೇರೆಗೆ ರಸ್ತೆಗಳ ಅಭಿವೃದ್ಧಿ ಕೈಗೊಳ್ಳಲಾಗುವುದು ಎಂದು ಹೇಳಿದರು.
ಹರಪ್ಪನಹಳ್ಳಿ ಶಾಸಕ ಹಾಗೂ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಪಿ. ರವೀಂದ್ರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಂಗ್ರೆಸ್ ಮುಖಂಡರು ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಸಚಿವರಿಗೆ ಮನವಿ ಸಲ್ಲಿಸಿದರು. ಜಿಪಂ ಅಧ್ಯಕ್ಷೆ ಶೋಭಾ ಬೆಂಡಿಗೇರಿ, ವಿಪ ಮಾಜಿ ಸದಸ್ಯ ಕೆ.ಎಸ್.ಎಲ್. ಸ್ವಾಮಿ, ಪುರಸಭೆ ಸದಸ್ಯ ಎಂ. ಸುಧೀರ್, ಸಿ.ಆರ್. ಹನುಮಂತ, ಎಸ್. ಸುರೇಶ್, ಭಟ್ಟ ಪ್ರಸಾದ್, ಕೆ.ಎಸ್. ರಾಜಾಸಾಬ್, ಬಿ. ನಾಗರಾಜ್, ಡಾ. ವಿ.ಎಲ್. ಬಾಬು ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.