ಬಳ್ಳಾರಿ

ಗ್ರಾಪಂ ಅವ್ಯವಹಾರ ಆರೋಪದಲ್ಲಿ ಹುರುಳಿಲ್ಲ

Published On :

ಕೂಡ್ಲಿಗಿ:  ತಾಲೂಕಿನ ಮಾಕನಡುಕು ಗ್ರಾಪಂನಲ್ಲಿ ಅವ್ಯವಹಾರ ನಡೆದಿದೆ ಎಂದು ಕೊಟ್ಟೂರು ಮಾಜಿ ಶಾಸಕ ಕೆ.ವಿ. ರವೀಂದ್ರನಾಥ ಬಾಬು ಆರೋಪಿಸಿರುವುದು ಸತ್ಯಕ್ಕೆ ದೂರವಾದ ಸಂಗತಿ ಎಂದು ಸ್ಥಳೀಯ ವಾಲ್ಮೀಕಿ ಸಂಘದ ಅಧ್ಯಕ್ಷ ಎನ್. ನಾಗಣ್ಣ ತಿಳಿಸಿದ್ದಾರೆ.
ಮಾಜಿ ಶಾಸಕ ರವೀಂದ್ರನಾಥ ಮಾಕನಡಕು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿಯಡಿ ರು. 41 ಲಕ್ಷ ಮೌಲ್ಯದ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದರು. ಈ ಕುರಿತಂತೆ ಡಿ. 3ರಂದು 'ಕನ್ನಡಪ್ರಭ'ದಲ್ಲಿ ವರದಿ ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಚಿಕ್ಕಜೋಗಿಹಳ್ಳಿಯ ನವೋದಯ ಶಾಲೆ ಮತ್ತು ಆಸ್ಪತ್ರೆ ಆವರಣದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಸಸಿ ನೆಡಲಾಗಿದೆ. ಅದಕ್ಕೆ ಪೂರಕ ದಾಖಲೆಗಳು ಪಂಚಾಯಿತಿಯಲ್ಲಿ ಇವೆ. ಮಳೆ ಅಭಾವದಿಂದ ಕೆಲವು ಸಸಿಗಳು ಹಾಳಾಗಿರಬಹುದೇ ವಿನಃ ಅವ್ಯವಹಾರ ನಡೆಸಿಲ್ಲ ಎಂದು ನಾಗಣ್ಣ ಸ್ಪಷ್ಟೀಕರಣ ನೀಡಿದ್ದಾರೆ.
ವಾರ್ಡ್ ಮತ್ತು ಗ್ರಾಮಸಭೆಗಳಲ್ಲಿ ವಸತಿ ಯೋಜನೆಗಳ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಎನ್‌ಆರ್‌ಇಜಿ ಯೋಜನೆ ಕಾಮಗಾರಿಯಲ್ಲಿ ತಾಲೂಕಿನಲ್ಲೇ ಹೆಚ್ಚು ಪ್ರಗತಿ ಸಾಧಿಸಲಾಗಿದೆ. ವಿನಾಕಾರಣ ಇಂಥ ಆರೋಪ ಮಾಡುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಸುಳ್ಳು ಆರೋಪಗಳಿಂದ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಮತ್ತು ಅಧಿಕಾರಿಗಳಿಗೆ ಕಸಿವಿಸಿಯಾಗುತ್ತಿದೆ. ಇದರಿಂದ ಗ್ರಾಮಾಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲು ಹಿಂದೇಟು ಹಾಕುವಂಥ ವಾತಾವರಣ ನಿರ್ಮಾಣವಾಗುತ್ತದೆ ಎಂದು ನಾಗಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಗ್ರಾಮಾಭಿವೃದ್ಧಿಗೆ ಅಡಚಣೆಯಾಗುವಂಥ ಹೇಳಿಕೆ ನೀಡುತ್ತಿರುವುದು ಖಂಡನೀಯ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.