ಇಂದು ಸಾಂಸ್ಕೃತಿಕ ಸೌರಭ
ಬಳ್ಳಾರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಡಿ. 16ರಂದು ಚಿಗುರು ಹಾಗೂ ಸಾಂಸ್ಕೃತಿಕ ಸೌರಭ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಚಿಗುರು ಕಾರ್ಯಕ್ರಮ ಡಿ. 16ರ ಬೆಳಗ್ಗೆ 10.30ಕ್ಕೆ ಹೂವಿನಹಡಗಲಿ ತಾಲೂಕು ಹೊಳಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದ್ದು, ಅಂಕಿತಾ ಬೆಳಸಿ ಮತ್ತು ತಂಡದವರಿಂದ ಜಾನಪದ ನೃತ್ಯ ಏರ್ಪಡಿಸಲಾಗಿದೆ. ಜಿಪಂ ಅಧ್ಯಕ್ಷೆ ಶೋಭಾ ಬೆಂಡಿಗೇರಿ ಉದ್ಘಾಟಿಸಲಿದ್ದಾರೆ. ಹೊಳಲು ಗ್ರಾಪಂ ಅಧ್ಯಕ್ಷೆ ಹಾವೇರಿ ರೇಖಾ ಅಧ್ಯಕ್ಷತೆ ವಹಿಸಲಿದ್ದಾರೆ. ಎಸ್ಡಿಎಂಸಿ ಅಧ್ಯಕ್ಷ ನಂದೆಮ್ಮನರ ಬಸವರಾಜಪ್ಪ ಉಪಸ್ಥಿತರಿರುತ್ತಾರೆ. ಅದೇ ರೀತಿ ಅಂದು ಮಧ್ಯಾಹ್ನ 3.30ಕ್ಕೆ ಸಂಡೂರು ತಾಲೂಕು ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಎಸ್.ಪಿ. ರುಕುಮಾ ಅವರು ಕರ್ನಾಟಕ ಶಾಸ್ತ್ರೀಯ ಸಂಗೀತ ಪ್ರಸ್ತುತ ಪಡಿಸಲಿದ್ದಾರೆ ಎಎಂದು ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್ ತಿಳಿಸಿದ್ದಾರೆ.
ಅರ್ಜಿ ಅಹ್ವಾನ
ಹೂವಿನಹಡಗಲಿ: ಸಮಗ್ರ ಶಿಶು ಅಭಿವೃದ್ಧಿ ಯೋಜನಾ ಇಲಾಖೆಯ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಿದೆ. ತಾಲೂಕಿನ ಹಿರೇಕೊಳಚಿ ಅಂಗನವಾಡಿ 2ನೇ ಕೇಂದ್ರದ ಕಾರ್ಯಕರ್ತೆ ಹಾಗೂ ಸೋಗಿ ಅಂಗನವಾಡಿ 3ನೇ ಕೇಂದ್ರದ ಸಹಾಯಕಿ ಹುದ್ದೆ ಖಾಲಿ ಇವೆ. ಸ್ಥಳೀಯ ಅರ್ಹ ಮಹಿಳಾ ಅಭ್ಯರ್ಥಿಗಳು ಜ. 6, 2014ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ವೇಳೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ಬಳ್ಳಾರಿ: ತಾಲೂಕಿನ ಹಲಕುಂದಿ ಗ್ರಾಪಂ ತನ್ನ ವ್ಯಾಪ್ತಿಯ 40 ಗ್ರಾಮೀಣ ನಿರುದ್ಯೋಗಿ ಯುವ ಜನರಿಗೆ ಸ್ವ ಉದ್ಯೋಗ, ವೃತ್ತಿ ಕೌಶಲ್ಯ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು 18ರಿಂದ 35 ವರ್ಷದೊಳಗಿರಬೇಕು, ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿರಬೇಕು. ಅಭ್ಯಾರ್ಥಿಗಳು ಅರ್ಜಿಗಳನ್ನು ಡಿ. 18ರೊಳಗಾಗಿ ಪಿಡಿಒ, ಗ್ರಾಪಂ, ಹಲಕುಂದಿ ಇವರಿಗೆ ಸಲ್ಲಿಸಬೇಕೆಂದು ಪಿಡಿಒ ಸುಮಲತಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

