ನಾಳೆ ಜಿಪಂ ಸಭೆ
ಬಳ್ಳಾರಿ: ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಡಿ. 18ರಂದು ಬೆಳಗ್ಗೆ 11 ಗಂಟೆಗೆ 13ನೇ ಸಾಮಾನ್ಯ ಸಭೆ ನಡೆಯಲಿದೆ. ಎಲ್ಲ ಸದಸ್ಯರು ಹಾಗೂ ಸಂಬಂಧಿಸಿದ ಅಧಿಕಾರಿಗಳು ಹಾಜರಾಗಬೇಕೆಂದು ಜಿಲ್ಲಾ ಪಂಚಾಯಿತಿ ಸಿಇಒ ಮಂಜುನಾಥ ನಾಯಕ್ ತಿಳಿಸಿದ್ದಾರೆ.
ಬಳ್ಳಾರಿ: ಅಪರಾಧ ತಡೆಮಾಸಾಚರಣೆ ಕಾರ್ಯಕ್ರಮ
ಬಳ್ಳಾರಿ: ನಗರದ ವಾರ್ಡ್ಲಾ ಕಾಲೇಜಿನಲ್ಲಿ ಈಚೆಗೆ ಬ್ರೂಸ್ಪೇಟೆ ಪೊಲೀಸ್ ಠಾಣೆ ವತಿಯಿಂದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮಾಲತೇಶ್ ಎನ್ ಕೂನಬೇವ್, ಪಿಎಸ್ಐ ಆರ್. ನಾಗರಾಜ್, ಅಪರಾಧ ವಿಭಾಗದ ಪಿಎಸ್ಐ ಸಿ.ಕೆ. ಗಂಗಯ್ಯ ಇದ್ದರು.
ಬೀಗ ಮುರಿದು ನಗದು, ಬೆಳ್ಳಿ ಸಾಮಗ್ರಿ ಕಳವು
ಕಂಪ್ಲಿ: ಪಟ್ಟಣದ ಕೋಟೆ ಪ್ರದೇಶದ ಮನೆಯೊಂದರ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ಭಾನುವಾರ ಬೆಳಗಿನ ಜಾವ ಜರುಗಿದೆ. ಎ. ಮಂಜುನಾಥ ಎನ್ನುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಕುಟುಂಬದವರು ಚಿತ್ರದುರ್ಗದ ಸಂಬಂಧಿಕರ ಮನೆಗೆ ತೆರಳಿದ್ದಾಗ ರಾತ್ರಿ ಬೀಗ ಮುರಿದು ಮನೆಯಲ್ಲಿದ್ದ ಸುಮಾರು ರು. 30 ಸಾವಿರ ನಗದು, ಬೆಳ್ಳಿ ಕೊಡ, ದೇವರ ಮನೆಯಲ್ಲಿದ್ದ ಬೆಳ್ಳಿ ದೇವರ ವಿಗ್ರಹ ಹಾಗೂ ಬೆಳ್ಳಿಯ ಪಾತ್ರೆಗಳನ್ನು ಕದ್ದು ಪರಾರಿಯಾಗಿದ್ದಾರೆ. ಬಳ್ಳಾರಿಯಿಂದ ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು. ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಶ್ಮಿ ಪರಡ್ಡಿ, ಸಿಪಿಐ ಆರ್. ಹನುಮಂತಪ್ಪ, ಪಿಎಸ್ಐಗಳಾದ ಡಿ. ಹುಲುಗಪ್ಪ, ಎಚ್. ದೊಡ್ಡಣ್ಣ ಆಗಮಿಸಿ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ. ಕಂಪ್ಲಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಲಬೂರು ನಿಂಗಪ್ಪ ನಿಧನ
ಬಳ್ಳಾರಿ: ಕೂಡ್ಲಿಗಿ ತಾಲೂಕಿನ ಕೆ. ಗಜಾಪುರ ಗ್ರಾಮದಲ್ಲಿ ರೈತ ಮುಖಂಡ ಅಲಬೂರ ನಿಂಗಪ್ಪ (80) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಮೃತರಿಗೆ ಮೂವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳು ಇದ್ದಾರೆ. ಇವರ ಅಂತ್ಯಕ್ರಿಯೆ ಡಿ. 17ರಂದು ಬೆಳಗ್ಗೆ 9ಕ್ಕೆ ಗಜಾಪುರ ಗ್ರಾಮದಲ್ಲಿ ನಡೆಯಲಿದೆ ಎಂದು ಅವರ ಪುತ್ರ ಮಂಜುನಾಥ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

