ನ್ಯಾ. ಸಂತೋಷ್ ಹೆಗ್ಡೆ, ಕೋ.ಚ, ವಿಜ್ಞಾನಿ ಶಿವಕುಮಾರ್‌ಗೆ ನಾಡೋಜ ಗೌರವ
ಹೊಸಪೇಟೆ: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ, ಖ್ಯಾತ ಲೇಖಕ ಹಾಗೂ ಸ್ವಾತಂತ್ರ್ಯ ಹೋರಾಟಗಾರ, ನ್ಯಾಯಮೂರ್ತಿ ಕೋ. ಚನ್ನಬಸಪ್ಪ, ಖ್ಯಾತ ವಿಜ್ಞಾನಿ ಎಸ್.ಕೆ. ಶಿವಕುಮಾರ್ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರತಿಷ್ಠಿತ ನಾಡೋಜ ಪದವಿಗೆ ಭಾಜನರಾಗಿದ್ದಾರೆ.
ಡಿ.21ರಂದು ನಡೆಯಲಿರುವ 22ನೇ ನುಡಿ ಹಬ್ಬದಲ್ಲಿ (ಘಟಿಕೋತ್ಸವ) ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಆದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಕನ್ನಡ ನಾಡು ನುಡಿಗೆ ಅನುಪಮ ಸೇವೆ ಸಲ್ಲಿಸಿದ ಮೂರು ಗಣ್ಯರಿಗೆ ನಾಡೋಜ ಗೌರವ ಪದವಿ ಪ್ರದಾನ ಮಾಡಲಿದ್ದಾರೆ. ಪರಿಸರ ವಿಜ್ಞಾನಿ ಹಾಗೂ ಪತ್ರಕರ್ತ ನಾಗೇಶ ಹೆಗಡೆ ನುಡಿಹಬ್ಬ ಭಾಷಣ ಮಾಡಲಿದ್ದಾರೆ. ಘಟಿಕೋತ್ಸವದಲ್ಲಿ ಮೂವರಿಗೆ ಡಿ.ಲಿಟ್, 57 ಸಂಶೋಧಕರಿಗೆ ಪಿಎಚ್‌ಡಿ ಪದವಿಗಳನ್ನು ಉನ್ನತ ಶಿಕ್ಷಣ ಸಚಿವ ಆರ್.ವಿ. ದೇಶಪಾಂಡೆ ಪ್ರದಾನ ಮಾಡಲಿದ್ದಾರೆ. 92 ಎಂಫಿಲ್, 11 ಎಂಎ, ಪಿಎಚ್‌ಡಿ, 13 ಎಂವಿಎ, 7 ಎಂ. ಮ್ಯೂಜಿಕ್, 249 ಬಿವಿಎ, 5 ಬಿ. ಮ್ಯೂಜಿಕ್, 235 ಚಿತ್ರಕಲೆ ಡಿಪ್ಲೊಮಾ, 7 ಜನರಿಗೆ ನಾಟಕ ಡಿಪ್ಲೊಮಾ ಪದವಿಗಳನ್ನು ನೀಡಿ ಗೌರವರಿಸಲಾಗುತ್ತದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಹಿ.ಚಿ. ಬೋರಲಿಂಗಯ್ಯ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

