ಬಳ್ಳಾರಿ ಎಂಪಿ ಅಭ್ಯರ್ಥಿ ಟಿಕೆಟ್ ತಮಗೆ: ಹನುಮಂತಪ್ಪ
ಹೊಸಪೇಟೆ: ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ವಿಜಯನಗರ ವಿಧಾನಸಭಾ (ಹೊಸಪೇಟೆ) ಕ್ಷೇತ್ರದವರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿದ್ದೇವೆ. ಲೋಕಸಭಾ ಚುನಾವಣೆಯ ಟಿಕೆಟ್ ತಮಗೆ ಸಿಗುವ ಸಾಧ್ಯತೆ ಹೆಚ್ಚಿದೆ ಎಂದು ಸ್ಥಳೀಯ ಕಾಂಗ್ರೆಸ್ ಮುಖಂಡ ಜಿ.ಕೆ. ಹನುಮಂತಪ್ಪ ಹೇಳಿದರು.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮಾಜಿ ಸಂಸದ ಎನ್.ವೈ. ಹನುಮಂತಪ್ಪ ಅವರ ಆರೋಗ್ಯ ಸರಿಯಿಲ್ಲದ ಕಾರಣದ ಪಕ್ಷ ಸಂಘಟನೆಯಲ್ಲಿ ತೊಡಗುವುದು ಕಷ್ಟವಾಗುತ್ತಿರುವುದರಿಂದ ಲೋಕಸಭಾ ಚುನಾವಣಾ ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಸ್ಪಲ್ಪಮಟ್ಟಿಗೆ ಅವರನ್ನು ಪರಿಗಣಿಸುವ ಸಾಧ್ಯತೆ ಕಡಿಮೆ. ಲೋಕಸಭಾ ಚುನಾವಣೆಯಲ್ಲಿ ಹೊಸಪೇಟೆ ವಿಧಾನಸಭಾ ಕ್ಷೇತ್ರ ನಿರ್ಣಾಯಕವಾಗಿದ್ದು, ನನ್ನನ್ನು ಕಾಂಗ್ರೆಸ್ ಅಭ್ಯರ್ಥಿನ್ನಾಗಿ ಮಾಡಿದರೆ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ.
ಈ ಕುರಿತು ಇತ್ತೀಚೆಗೆ ನಾನು ಮತ್ತು ಕಾಂಗ್ರೆಸ್ ಮುಖಂಡ ಎಚ್. ಅಬ್ದುಲ್ ವಹಾಬ್ ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಹೊತ್ತಿರುವ ದಿಗ್ವಿಜಯ್ ಸಿಂಗ್ ಅವರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆಯ ಟಿಕೆಟ್ ತಮಗೆ ನೀಡುವಂತೆ ವರಿಷ್ಠರ ಗಮನಕ್ಕೆ ತರಲಾಗಿದೆ ಎಂದರು.
ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಅನೇಕ ವರ್ಷಗಳಿಂದ ಪಕ್ಷದ ಏಳ್ಗೆಗೆ ಶ್ರಮಿಸಿದ್ದೇನೆ. 2004ರಲ್ಲಿ ಹೊಸಪೇಟೆ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಅವಕಾಶ ಕಲ್ಪಿಸಿಕೊಡಲಾಗಿತ್ತು. ಕೆಲ ಕಾರಣಾಂತರಗಳಿಂದ ಆ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಯಿತು. ಪಕ್ಷ ನಿಷ್ಠೆ ಪರಿಗಣಿಸಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನನಗೆ ನೀಡಬೇಕು. ಟಿಕೆಟ್ ನೀಡಿದ್ದೇ ಆದರೆ ಗೆಲವು ಸುಲಭವಾಗಲಿದೆ ಎಂದು ತಿಳಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ. ವೆಂಕಟರಮಣ, ಕಾಂಗ್ರೆಸ್ ಮುಖಂಡರಾದ ಅಬೀದ್ ಹುಸೇನ್, ಅಯ್ಯಾಳಿ ಮೂರ್ತಿ, ಬಾಲಸಾಹೇಬ್, ಮುನ್ನಿ, ಬ್ಲಾಕ್ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ವಿ. ಹನುಮಂತಪ್ಪ, ಪಂಪಾಪತಿ, ಎಚ್‌ಎನ್‌ಎಫ್ ರಫೀಕ್, ಸಿ. ಕೃಷ್ಣ, ರಫೀಕ್ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

