ಬಳ್ಳಾರಿ

ಚಿಕೂನ್‌ಗುನ್ಯಾ: ತಾಂಡಾ ತತ್ತರ

Published On :

ಹಗರಿಬೊಮ್ಮನಹಳ್ಳಿ:ತಾಲೂಕಿನ ಗಡಿಗ್ರಾಮ ಕಲ್ಲಹಳ್ಳಿ ತಾಂಡಾದಲ್ಲಿ 20 ದಿನಗಳಿಂದ ಕಾಣಿಸಿಕೊಂಡಿರುವ ಚಿಕೂನ್‌ಗುನ್ಯದಿಂದ ತಾಂಡಾದ ಜನತೆ ಭಯಗೊಂಡಿದ್ದಾರೆ. 50ಕ್ಕೂ ಅಧಿಕ ಜನರಿಗೆ ರೋಗ ತಗುಲಿದ್ದು, ನಿತ್ಯ ಹಗರಿಬೊಮ್ಮನಹಳ್ಳಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಈ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲ ವಯೋವಾನದವರು ಚಿಕೂನ್‌ಗುನ್ಯದಿಂದ ಬಳಲುವಂತಾಗಿದೆ. ಚಿಕಿತ್ಸೆ ಪಡೆದವರನ್ನು ಬಿಟ್ಟು ಪ್ರತಿನಿತ್ಯ ಹೊಸಬರಲ್ಲಿ ರೋಗ ಕಾಣಿಸಿಕೊಳ್ಳುತ್ತಿರುವುದು ತಾಂಡಾದ ಜನತೆಯಲ್ಲಿ ಆತಂಕ ಮೂಡಿಸಿದೆ. ತಾಲೂಕು ವೈದ್ಯಾಧಿಕಾರಿಗಳು ನಿರಂತರ ತಾಂಡಾಕ್ಕೆ ಭೇಟಿ ನೀಡುತ್ತಿದ್ದಾರೆ, ಆದರೆ ರೋಗ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಮುನ್ನೆಚ್ಚರಿಕೆ ಕ್ರಮ ವಹಿಸದಿದ್ದರೆ ಮುಂದಿನ ದಿನಗಳಲ್ಲಿ ರೋಗ ವ್ಯಾಪಕ ಪ್ರಮಾಣದಲ್ಲಿ ಹರಡುವ ಲಕ್ಷಣಗಳು ಕಾಣಿಸುತ್ತಿವೆ. ತಾಲೂಕು ವೈದ್ಯಾಧಿಕಾರಿ, ಸ್ಥಳೀಯ ಆರೋಗ್ಯ ಕೇಂದ್ರದ ಸಿಬ್ಬಂದಿ ತಾಂಡಾಕ್ಕೆ ಭೇಟಿ ನೀಡಿ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಪ್ರಯೋಜನವಾಗುತ್ತಿಲ್ಲ. ತಾಂಡಾದಲ್ಲೇ ತಾತ್ಕಾಲಿಕ ಆರೋಗ್ಯ ಕೇಂದ್ರ ತೆರೆದು ಚಿಕಿತ್ಸೆ ವ್ಯವಸ್ಥೆ ಮಾಡಿದರೆ ಮಾತ್ರ ರೋಗದಿಂದ ಜನತೆಯನ್ನು ರಕ್ಷಿಸಬಹುದು ಎಂದು ತಾಪಂ ಸದಸ್ಯೆ ಮಂಜುಳಾ ಕೃಷ್ಣನಾಯ್ಕ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.