ವಿದ್ಯಾರ್ಥಿನಿ ಮೇಲೆ ಹಲ್ಲೆ: ಎಬಿವಿಪಿ ಪ್ರತಿಭಟನೆ
ಬಳ್ಳಾರಿ: ಸ್ಥಳೀಯ ಕೋಟೆ ಪ್ರದೇಶದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿನಿಯ ಮೇಲೆ ನಡೆದ ಹಲ್ಲೆ ಪ್ರಕರಣ ಖಂಡಿಸಿ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ವಾರ್ಡ್ಲಾ ಕಾಲೇಜು ಆವರಣದಿಂದ ಪ್ರಾರಂಭವಾದ ನೂರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರ ಪ್ರತಿಭಟನಾ ಮೆರವಣಿಗೆ ಕಾಳಮ್ಮ ಬೀದಿ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ, ನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು.
ನಗರದ ಕೋಟೆ ಪ್ರದೇಶದಲ್ಲಿ ವಾಸಿಸುತ್ತಿದ್ದ ವಿದ್ಯಾರ್ಥಿನಿ ಶ್ರೀಲಕ್ಷ್ಮಿ ಕುಟುಂಬದ ಮೇಲೆ ವೇಶ್ಯಾವಾಟಿಕೆ ಆರೋಪ ಹೊರಿಸಿದ ಸ್ಥಳೀಯ ಪುಂಡರ ಗುಂಪೊಂದು ಮನೆಗೆ ನುಗ್ಗಿ, ವಿದ್ಯಾರ್ಥಿನಿ ಹಾಗೂ ಆಕೆ ತಾಯಿ, ಸ್ನೇಹಿತನ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿರುವುದು ಖಂಡನೀಯವಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು.
ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಈ ರೀತಿ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕ್ರಮಕೈಗೊಳ್ಳಲು ಮುಂದಾಗಬೇಕು. ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ದಾರಿಯಲ್ಲಿ, ಕಾಲೇಜು ಸಮೀಪ ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ಈ ರೀತಿಯ ದೌರ್ಜನ್ಯಗಳಿಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಹಾಂತೇಶ ನಾಯಕ, ಕೇದಾರನಾಥ, ಎಸ್.ಆರ್. ರವಿಗೌಡ, ಮಣಿಕಂಠರೆಡ್ಡಿ, ರಾಮಕೃಷ್ಣ, ಶೈಲಜಾ, ಕಾವ್ಯ, ಇಂದ್ರಜಾ, ಲಕ್ಷ್ಮಿ, ಸೌಮ್ಯಾ, ಗೀತಾ, ಪೂರ್ಣಿಮಾ, ತ್ರಿವೇಣಿ ಮತ್ತು ಶಿಲ್ಪಾ ಇತರರು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

