ಬಳ್ಳಾರಿ

ಇಂದು ಹಂಪಿ ವಿವಿ ಘಟಿಕೋತ್ಸವ

Published On :

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಡಿ. 20
ಹಂಪಿ ಕನ್ನಡ ವಿಶ್ವವಿದ್ಯಾಲಯದ 22ನೇ ನುಡಿಹಬ್ಬದ ಘಟಿಕೋತ್ಸವ ಸಮಾರಂಭವು ವಿಶ್ವವಿದ್ಯಾಲಯದ ಅಕ್ಷರ ಗ್ರಂಥಾಲಯ ಕಟ್ಟಡದಲ್ಲಿ ಡಿ. 21ರಂದು ಶನಿವಾರ ಮಧ್ಯಾಹ್ನ 3-30ಕ್ಕೆ ನಡೆಯಲಿದೆ.
ಕನ್ನಡ ನಾಡು, ನುಡಿಗೆ ಅನುಪಮ ಸೇವೆ ಸಲ್ಲಿಸಿದ ನ್ಯಾಯಮೂರ್ತಿ ಎನ್. ಸಂತೋಷ ಹೆಗ್ಡೆ, ಸಾಹಿತಿ ಕೋ. ಚನ್ನಬಸಪ್ಪ, ವಿಜ್ಞಾನಿ ಎಸ್.ಕೆ. ಶಿವಕುಮಾರ್ ಅವರಿಗೆ ನಾಡೋಜ ಗೌರವ ಪದವಿ ಪ್ರದಾನ ಮಾಡಲಾಗುವುದು.
ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ರಾಜ್ಯದ ಘನತೆವೆತ್ತ ರಾಜ್ಯಪಾಲ ಹನ್ಸ್‌ರಾಜ್ ಭಾರದ್ವಾಜ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿಕೊಳ್ಳುವರು. ಉನ್ನತ ಶಿಕ್ಷಣ ಸಚಿವ ಹಾಗೂ ಹಂಪಿ ಕನ್ನಡ ವಿವಿ ಸಮ ಕುಲಾಧಿಪತಿಗಳಾಗಿರುವ ಆರ್.ವಿ. ದೇಶಪಾಂಡೆ ಅವರು ಘಟಿಕೋತ್ಸವದಲ್ಲಿ ಡಿಲಿಟ್, ಪಿಎಚ್‌ಡಿ ಮತ್ತು ಎಂಫಿಲ್ ಪದವಿಗಳನ್ನು ಪ್ರದಾನ ಮಾಡುವರು.
ಪರಿಸರ ವಿಜ್ಞಾನಿ ಹಾಗೂ ಪತ್ರಕರ್ತ ನಾಗೇಶ ಹೆಗಡೆ ಅವರು ನುಡಿಹಬ್ಬದ ಭಾಷಣ ಮಾಡುವರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ. ಹಿ.ಚಿ. ಬೋರಲಿಂಗಯ್ಯ ಸ್ವಾಗತ ಭಾಷಣ ಮಾಡುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.