ಕ್ವಿಂಟಲ್ ಹತ್ತಿ ಬೆಳೆಗೆ ರು. 6 ಸಾವಿರ ನೀಡಿ
ಬಳ್ಳಾರಿ: ಕ್ವಿಂಟಲ್ ಹತ್ತಿಗೆ ರು. 6 ಸಾವಿರ ದರ ನಿಗದಿಪಡಿಸುವಂತೆ ಒತ್ತಾಯಿಸಿ ರೈತ-ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ನಗರದಲ್ಲಿ ಬುಧವಾರ ರೈತರು ಪ್ರತಿಭಟನೆ ನಡೆಸಿದರು.
ನಗರದ ಪ್ರಮುಖ ರಸ್ತೆಗಳಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿದರು. ರಸ್ತೆಯುದ್ದಕ್ಕೂ ಹತ್ತಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.
ರೈತ-ಕೃಷಿ ಕಾರ್ಮಿಕರ ಸಂಘಟನೆಯ ಅಧ್ಯಕ್ಷ ಎ. ದೇವದಾಸ್ ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿ, ಬಳ್ಳಾರಿ ಜಿಲ್ಲೆಯಲ್ಲಿ ಅನೇಕ ಸಣ್ಣ ಮತ್ತು ಮಧ್ಯಮ ರೈತರು ಸಾವಿರಾರು ಎಕರೆ ಭೂಮಿಯಲ್ಲಿ ಹತ್ತಿ ಬೆಳೆದಿದ್ದಾರೆ. ಒಂದು ಎಕರೆ ಭೂಮಿಯಲ್ಲಿ ಹತ್ತಿ ಫಲವನ್ನು ತೆಗೆಯಲು ಇಂದಿನ ದುಬಾರಿ ದಿನಗಳಲ್ಲಿ ಬೀಜ, ಗೊಬ್ಬರ, ಕೀಟನಾಶಕ ಸೇರಿದಂತೆ ರೈತನು ಬಳಸುವ ಎಲ್ಲ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಒಂದು ಎಕರೆಗೆ 30ರಿಂದ 40 ಸಾವಿರ ಖರ್ಚು ಬರುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಇಂದು ರೈತನಿಗೆ ಸಿಗುವ ಕ್ವಿಂಟಲ್ಗೆ ರು. 4,400 ಮಾತ್ರ. ಈ ಹಣ ಯಾತಕ್ಕೂ ಸಾಲದೆ ರೈತ ನಷ್ಟಕ್ಕೊಳಗಾಗುತ್ತಾನೆ. ಮಧ್ಯವರ್ತಿಗಳು ಮತ್ತು ದಲ್ಲಾಳಿಗಳು ತಮಗಿಷ್ಟ ಬಂದಂತೆ ಬೆಲೆ ನಿಯಂತ್ರಿಸುತ್ತಾ ಈಗಾಗಲೇ ದಿವಾಳಿಯಾಗಿರುವ ರೈತನನ್ನು ಸಂಕಷ್ಟಕ್ಕೀಡು ಮಾಡಿ ದಿಕ್ಕು ತೋಚದಂತೆ ಮಾಡಿದ್ದಾರೆ ಎಂದು ತಿಳಿಸಿದರು.
ಜಾಗತೀಕರಣ ಜಾರಿಗೊಂಡ ನಂತರ ಅರಣ್ಯ ನಿಯಮದ ಮಾರುಕಟ್ಟೆಯಲ್ಲಿ ರೈತನು ಬದುಕಿನಲ್ಲಿ ಭರವಸೆ ಕಳೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ನಿಜಕ್ಕೂ ಆತಂಕಕಾರಿಯಾಗಿದೆ. ಆದ್ದರಿಂದ ರೈತರಿಗೆ ಭದ್ರತೆ ಒದಗಿಸಿ, ಭರವಸೆ ಮೂಡಿಸಲು ಹತ್ತಿ ಬೆಳೆದ ರೈತರಿಗೆ ಪ್ರತಿ ಕ್ವಿಂಟಲ್ ಹತ್ತಿ ಬೆಳೆಗೆ ರು. 6 ಸಾವಿರ ನಿಗದಿ ಪಡಿಸಬೇಕು. ಹತ್ತಿ ಮಾರುಕಟ್ಟೆಯಲ್ಲಿ ಮಧ್ಯವರ್ತಿಗಳು ಮತ್ತು ದಲ್ಲಾಳಿಗಳನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ರೈತನ ಬದುಕು, ಭವಿಷ್ಯ ಸುಧಾರಿಸಲು ಸರಿಯಾದ ವ್ಯವಸಾಯ ನೀತಿ ರೂಪಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನಂತರ ಆರ್ಕೆಎಸ್ ಮುಖಂಡರು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಅವರಿಗೆ ಮನವಿ ರವಾನಿಸಿದರು. ಪ್ರತಿಭಟನೆಯಲ್ಲಿ ರೈತ-ಕೃಷಿ ಕಾರ್ಮಿಕರ ಸಂಘಟನೆ ಕಾರ್ಯದರ್ಶಿ ಈ. ಹನುಮಂತಪ್ಪ, ಮುಖಂಡರಾದ ಕೆ. ಗಾದಿಲಿಂಗ, ಕೆ. ಬಸಣ್ಣ, ಈ. ಗೋಪಾಲ್, ಗೂಳಪ್ಪ, ರಾಮಪ್ಪ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

