ಐಟಿಐಗೆ ಸೆಮಿಸ್ಟರ್ ಪದ್ಧತಿ ವಿರೋಧಿಸಿ ಪ್ರತಿಭಟನೆ
ಹೂವಿನಹಡಗಲಿ: ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ ಸೆಮಿಸ್ಟರ್ ಪದ್ಧತಿ ಜಾರಿಗೊಳಿಸುವ ನಿರ್ಧಾರ ವಿರೋಧಿಸಿ ಎಐಡಿಎಸ್ಒ ಪ್ರತಿಭಟನೆ ನಡೆಸಿತು. ಪಟ್ಟಣದಲ್ಲಿ ಐಟಿಐ ಕಾಲೇಜು ವಿದ್ಯಾರ್ಥಿಗಳು ಎಐಡಿಎಸ್ಒ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಐಟಿಐ ತರಬೇತಿ ವಿರೋಧಿ ಸೆಮಿಸ್ಟರ್ ಪದ್ಧತಿ ಕೈಬಿಡುವಂತೆ ಆಗ್ರಹಿಸಿ ತಹಸೀಲ್ದಾರ್ ವಿಜಯಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಎಐಡಿಎಸ್ಒ ಸಂಚಾಲಕ ರಹಮತ್ ಬೀರಬ್ಬಿ ಮಾತನಾಡಿ, ಐಟಿಐ ತರಬೇತಿಗೆ ಏಕಾಏಕಿ ಡಿಜಿಇಟಿಯು ಬದಲಾವಣೆ ತಂದಿರುವುದು ತೀರಾ ಅವೈಜ್ಞಾನಿಕ. ತರಬೇತಿ ಆಧಾರಿತ ಕೋರ್ಸ್ಗಳಿಗೆ ಬರೀ ಅಂಕಗಳಿಗೆ ಮಾನ್ಯತೆ ನೀಡುವುದು ಸರಿಯಲ್ಲ. ಕೂಡಲೇ ಸರ್ಕಾರ ಸೆಮಿಸ್ಟರ್ ಪದ್ಧತಿ ಜಾರಿಗೊಳಿಸುವ ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿದರು. ಸೆಮಿಸ್ಟರ್ ಪದ್ಧತಿ ಮತ್ತು ಉದ್ಯೋಗ ಕೌಶಲ್ಯ ಪರೀಕ್ಷೆ ಕುರಿತು ತರಬೇತುದಾರರಿಗೂ ಸರಿಯಾದ ಮಾಹಿತಿ ಇಲ್ಲ. ಎರಡು ವರ್ಷಗಳ ಹಿಂದೆಯೇ ಎಸಿವಿಟಿಯ 39ನೇ ಸಭೆಯ ವಿವಾದಾತ್ಮಕ ಅಂಶಗಳು ಇನ್ನೂ ಸ್ಪಷ್ಟವಾಗಿಲ್ಲ. ಸೆಮಿಸ್ಟರ್ ಪದ್ಧತಿಯಲ್ಲಿ ತರಬೇತಿ ಪಡೆದವರನ್ನು ದೇಶದ ಕೈಗಾರಿಕಾ ವಲಯ ಒಪ್ಪಿಕೊಳ್ಳದಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ ಎಂದರು. ಎಐಡಿಎಸ್ಒ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ, ಎಐಡಿಎಸ್ಒ ಸದಸ್ಯರಾದ ಶ್ರೀನಿವಾಸ, ಗುರು ಇತರರು ಮಾತನಾಡಿದರು. ಸರ್ಕಾರಿ ಮತ್ತು ಖಾಸಗಿ ಐಟಿಐ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

