ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ: ಶಂಕರ್
ಕನ್ನಡಪ್ರಭ ವಾರ್ತೆ, ಕಂಪ್ಲಿ, ಡಿ. 26 ಸರ್ಕಾರದ ಸೌಲಭ್ಯಗಳನ್ನು ಅಂಗವಿಕಲರು ಸದುಪಯೋಗಪಡಿಸಿಕೊಳ್ಳಲು ಮುಂದಾಗಬೇಕು ಎಂದು ಕಂಪಿಲರಾಯ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಂ. ಶಂಕರ್ ತಿಳಿಸಿದರು.
ಇಲ್ಲಿನ ಕಂಪಿಲರಾಯ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದಿಂದ ವಿಶ್ವ ಅಂಗವಿಕಲರ ದಿನಾಚರಣೆ ನಿಮಿತ್ತ ಬುಧವಾರ ಹಮ್ಮಿಕೊಂಡಿದ್ದ ಅಂಗವಿಕಲರ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು.
ಪುರಸಭೆ ಅವರು ಸಂಘದ ಕಚೇರಿ ಕಟ್ಟಡಕ್ಕಾಗಿ ನಿವೇಶನ ನೀಡಬೇಕು. ಅಂಗವಿಕಲರ ಮೀಸಲಾತಿ ಅನ್ವಯ ಅರ್ಹ ಫಲಾನುಭವಿಗಳಿಗೆ ನಿವೇಶನ, ಮನೆಗಳನ್ನು ನೀಡಬೇಕು. ಕಂಪ್ಲಿ ಪಟ್ಟಣದಲ್ಲಿನ 223 ಅಂಗವಿಕಲರು ಸಂಘದಲ್ಲಿ ಸದಸ್ಯತ್ವ ಹೊಂದಿದ್ದಾರೆ. ಇಲ್ಲಿಯ ತನಕ ಪುರಸಭೆ 29 ತ್ರಿಚಕ್ರ ವಾಹನಗಳನ್ನು ಒದಗಿಸಿದೆ. ಇನ್ನೂ 10 ತ್ರಿಚಕ್ರ ವಾಹನಗಳು ಮಂಜೂರಾಗಿದ್ದು, ಇಲ್ಲಿಯವರೆಗೆ ವಿತರಣೆಯಾಗಿಲ್ಲ. ಕೂಡಲೆ ವಿತರಿಸಬೇಕು ಎಂದು ಮನವಿ ಮಾಡಿದರು.
ನಟರಾಜ ಕಲಾ ವಿಜಯ ಸಂಘದಿಂದ ಆರಂಭಗೊಂಡ ಮೆರವಣಿಗೆ ಡಾ. ರಾಜ್ಕುಮಾರ್ ಮುಖ್ಯರಸ್ತೆ ಮೂಲಕ ಸಾಗಿ ಕಲ್ಮಠದಲ್ಲಿ ಸಮಾವೇಶಗೊಂಡಿತು. ಮೆರವಣಿಗೆಯಲ್ಲಿ ಕಂಪಿಲರಾಯ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಕೆ. ಇಸ್ಮಾಯಿಲ್, ಉಪಾಧ್ಯಕ್ಷ ಬಿ. ಉಮೇಶ್, ಕಾರ್ಯದರ್ಶಿ ಕೆ. ವಾಣಿ, ಖಜಾಂಚಿ ಎನ್.ಎಂ. ವೀರೇಶ್, ಸಂಚಾಲಕ ಎಂ. ಖಾದರ್ ಬಾಷಾ, ಎಚ್.ಪಿ. ಶಿಕಾರಿ ರಾಮು, ರಮೇಶ್ ಹಾಗೂ ಇತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

