ಬಳ್ಳಾರಿ

ಚಿನ್ನಾಭರಣ ಕಳ್ಳತನ

Published On :

ಬಳ್ಳಾರಿ: ಸ್ಥಳೀಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಕಳ್ಳತನವಾಗಿರುವ ಘಟನೆ ಜರುಗಿದೆ. ನಗರದ ಬದ್ರಿ ನಾರಾಯಣ ದೇವಸ್ಥಾನ ರಸ್ತೆಯ ಶ್ಯಾಮ್‌ಸುಂದರ್ ಎಂಬುವವರ ಮನೆಯಲ್ಲೇ ಕಳುವಾಗಿದ್ದು, ಮನೆಯವರು ಊರಿಗೆ ತೆರಳಿರುವ ವೇಳೆ ಮನೆಯ ಬೀರೋದಲ್ಲಿಡಲಾಗಿದ್ದ ರು. 2,44,000 ಮೌಲ್ಯದ ಒಟ್ಟು 149 ಗ್ರಾಂ ಚಿನ್ನದ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಮನೆಯವರು ನೀಡಿದ ದೂರಿನ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಟ್ಕಾ: ನಗದು ವಶ
ಬಳ್ಳಾರಿ: ಮಟ್ಕಾ ಜೂಜಾಟದ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿ, ಓರ್ವನನ್ನು ಬಂಧಿಸಿ, ನಗದು ವಶಪಡಿಸಿಕೊಂಡಿರುವ ಘಟನೆ ಸ್ಥಳೀಯ ಬ್ರೂಸ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಸಂಜೆ ಜರುಗಿದೆ. ನಗರದ ರೂಪನಗುಡಿ ರಸ್ತೆಯ ರಾಜ್ಯೋತ್ಸವ ನಗರದ 1ನೇ ಕ್ರಾಸ್‌ನಲ್ಲಿರುವ ಖಾಸಿಂಸಾಬ್ ಎಂಬುವವರ ಮನೆಯ ಮುಂಭಾಗ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಆಧರಿಸಿ ಠಾಣೆಯ ಪಿಎಸ್‌ಐ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ ಖಾಸಿಂಸಾಬ್ ಎಂಬುವವನನ್ನು ಬಂಧಿಸಿದ್ದು, ಬಂಧಿತನಿಂದ ರು. 5,500 ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ನಗರದ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೀಗ ಮುರಿದು ಚಿನ್ನ, ನಗದು ಕಳ್ಳತನ: ದೂರು
ಬಳ್ಳಾರಿ: ಮನೆಯೊಂದರ ಬೀಗ ಮುರಿದು ಚಿನ್ನದ ಆಭರಣ ಮತ್ತು ನಗದು ಕಳವು ಮಾಡಿರುವ ಘಟನೆ ಜಿಲ್ಲೆಯ ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ. ಮನೆಯ ಬೀಗ ಮುರಿದ ಕಳ್ಳರು ಬೀರೋದಲ್ಲಿಡಲಾಗಿದ್ದ ರು. 1,21,000 ಸಾವಿರ ಮೌಲ್ಯದ ಚಿನ್ನದ ಆಭರಣಗಳು ಹಾಗೂ ರು. 8 ಸಾವಿರ ನಗದನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ. ಈ ಬಗ್ಗೆ ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.