ಸಹಕಾರ ಸಂಘಗಳಚುನಾವಣೆ ಅಧಿಸೂಚನೆ ಪ್ರಕಟ
ಬಳ್ಳಾರಿ: ಅವಧಿ ಮುಗಿದ 7 ಸಾವಿರ ಸಹಕಾರ ಸಂಘಗಳಿಗೆ ಫೆಬ್ರವರಿ ತಿಂಗಳಿನಲ್ಲಿ ಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಹಕಾರ ಚುನಾವಣೆ ಆಯುಕ್ತ ಎನ್.ಸಿ. ಮುನಿಯಪ್ಪ ತಿಳಿಸಿದರು. ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. 2014ರ ಫೆಬ್ರವರಿ 2, 9, 16, 23 ಮತ್ತು ಮಾರ್ಚ್ 2ರಂದು ಚುನಾವಣೆ ನಡೆಸಲಾಗುವುದು. ಬಳ್ಳಾರಿಯಲ್ಲಿ 292 ಸಹಕಾರ ಸಂಘಗಳಿಗೆ ಚುನಾವಣೆ ನಡೆಸಲಾಗುವುದು. ಒಕ್ಕೂಟಗಳಿಗೆ ಜಿಲ್ಲಾಧಿಕಾರಿಗಳು ಜಿಲ್ಲಾ ಚುನಾವಣಾಧಿಕಾರಿಯನ್ನು ನೇಮಕಾತಿ ಮಾಡಲಾಗಿದೆ. ಉಳಿದಂತೆ ಸಹಕಾರ ಸಂಘಗಳಿಗೆ ಸಹಕಾರ ಸಂಘಗಳ ನೋಂದಣಿ ಇಲಾಖೆಯ ಉಪ ನಿಬಂಧಕರನ್ನು ಜಿಲ್ಲಾ ಚುನಾವಣಾಧಿಕಾರಿಯನ್ನಾಗಿ ನೇಮಕಾತಿ ಮಾಡಲಾಗಿದೆ ಎಂದರು. ಎಲ್ಲ ಇಲಾಖೆಗಳ ಅಧಿಕಾರಿಗಳನ್ನು ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಾಗುವುದು. ಚುನಾವಣಾ ಆಯೋಗದ ನಿಯಮದಂತೆ ಈ ಚುನಾವಣಾ ಪ್ರಕ್ರಿಯೆಯೂ ಇರುತ್ತದೆ. ಬಳ್ಳಾರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಚುನಾವಣಾ ನಿಯೋಜಿತರಿಗೆ ಸಿಬ್ಬಂದಿ ಕಾರ್ಯಾಗಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. 5 ವರ್ಷ ಪೂರ್ಣಗೊಂಡ ಸಹಕಾರ ಸಂಘಗಳು ಮಾಹಿತಿ ನೀಡಬೇಕು. ಸಂಬಂಧಿಸಿದವರು ತಿಳಿಸಬೇಕು. ಚುನಾವಣೆಗೆ ಒಳಗಾಗದಿದ್ದರೆ ಆಡಳಿತಾಧಿಕಾರಿಗಳನ್ನು ನೇಮಕಾತಿ ಮಾಡಲಾಗುವುದು. ಪ್ರಸ್ತುತವಾಗಿ 32 ಸಾವಿರ ಸಹಕಾರ ಸಂಘಗಳು ಕಾರ್ಯನಿರ್ವಹಿಸುತ್ತಿವೆ ಎಂದರು. ಅಪರ ಜಿಲ್ಲಾಧಿಕಾರಿ ವೆಂಕಟೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

