ಬಳ್ಳಾರಿ

ಜನರಲ್ಲಿ ಕಾನೂನಿನ ಅರಿವು ಅಗತ್ಯ

Published On :

ಹಗರಿಬೊಮ್ಮನಹಳ್ಳಿ: ಮನುಷ್ಯ ಜೀವಿತಾವಧಿಯಲ್ಲಿ ಕಾನೂನಿನ ಬಗ್ಗೆ ಹಾಗೂ ಆರೋಗ್ಯದ ಬಗ್ಗೆ ಅರಿವು ಪಡೆಯುವುದು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ ಎಂದು ಹಗರಿಬೊಮ್ಮನಹಳ್ಳಿ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಎ. ಈರಣ್ಣ ಹೇಳಿದ್ದಾರೆ.
ತಾಲೂಕಿನ ಉತ್ತರ ತಂಬ್ರಹಳ್ಳಿ ಗ್ರಾಮದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ವಕೀಲರ ಸಂಘಗಳ ವತಿಯಿಂದ ಹಮ್ಮಿಕೊಂಡಿದ್ದ ಕಾನೂನಿನ ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ವೋಚ್ಚ ಹಾಗೂ ಉಚ್ಚ ನ್ಯಾಯಾಲಯಗಳ ಆದೇಶದಂತೆ ಇಂತಹ ಕಾರ್ಯಕ್ರಮ ನಡೆಸುತ್ತಿದ್ದು, ಇದರಿಂದ ಜನಸಾಮಾನ್ಯರಿಗೆ ನಿತ್ಯ ಜೀವನದಲ್ಲಿ ತಿಳಿಯಬೇಕಾದ ಕಾನೂನುಗಳ ಅರಿವು ಮೂಡಿಸಲಾಗುತ್ತದೆ. ಇದರ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದರು.
ಸರ್ಕಾರಿ ಅಭಿಯೋಜಕ ಮಂಜುನಾಥ ಮಾತನಾಡಿ, ಈಗಿನ ದಿನಗಳಲ್ಲಿ ಹೆಣ್ಣಿನ ಪರವಾಗಿ ಹೆಚ್ಚಿನ ಕಾನೂನು ಇವೆ. ಹೆಣ್ಣು ಮಕ್ಕಳು ಅವುಗಳನ್ನು ದುರುಪಯೋಗಪಡಿಸಿಕೊಳ್ಳುವ ಬದಲಾಗಿ ಅವುಗಳ ಆಳವನ್ನು ಅರ್ಥೈಸಿಕೊಳ್ಳಬೇಕು ಎಂದರು. ವಕೀಲರ ಸಂಘದ ಅಧ್ಯಕ್ಷೆ ಎಸ್.ಎಚ್. ವಿಶಾಲಾಕ್ಷಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷೆ ಬಿ. ನಿಂಗಮ್ಮ, ಹಗರಿಬೊಮ್ಮನಹಳ್ಳಿ ಸಿಪಿಐ ಮಲ್ಲೇಶನಾಯ್ಕ ದೊಡ್ಡಮನಿ, ವಕೀಲರ ಸಂಘದ ಎಚ್. ಸತ್ಯನಾರಾಯಣ, ಗಂಗಾಧರ, ನರೇಂದ್ರಬಾಬು, ಬಾವಿಪ್ರಕಾಶ, ಧರ್ಮನಗೌಡ, ಕಾಗಿ ಪ್ರಹ್ಲಾದ್, ಹಾಲೇಶ, ಗ್ರಾಪಂ ಸದಸ್ಯರಾದ ಯು. ದ್ಯಾಮಪ್ಪ, ಕೆ. ಖಾದರ್ ಸಾಬ್, ಎಂ. ತೋಟನಗೌಡ್ರು ಇತರರು ಭಾಗವಹಿಸಿದ್ದರು. ಅಕ್ಕಿ ಮಲ್ಲಿಕಾರ್ಜುನ ಸ್ವಾಗತಿಸಿದರು. ಎಂ. ಶ್ರೀನಿವಾಸ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.