ಅಸಮರ್ಪಕ ವಿದ್ಯುತ್ ಪೂರೈಕೆ: ಜೆಸ್ಕಾಂಗೆ ಮರಬ್ಬಿಹಾಳು ರೈತರ ಮುತ್ತಿಗೆ
ಹಗರಿಬೊಮ್ಮನಹಳ್ಳಿ: ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ, ಸತತ ಹತ್ತು ಗಂಟೆಗಳ ಕಾಲ ತ್ರೀಫೇಸ್ ವಿದ್ಯುತ್ ಸರಬರಾಜಿಗೆ ಒತ್ತಾಯಿಸಿ ಹಗರಿಬೊಮ್ಮನಹಳ್ಳಿ ತಾಲೂಕಿನ ಮರಬ್ಬಿಹಾಳು ಗ್ರಾಪಂ ವ್ಯಾಪ್ತಿಗೆ ಸೇರಿದ ನೂರಕ್ಕೂ ಅಧಿಕ ರೈತರು ಸೋಮವಾರ ಮಧ್ಯಾಹ್ನ ಪಟ್ಟಣದ ರಾಮನಗರದ ಕೆಚ್ಚಿನಬಂಡಿ ರಸ್ತೆಯಲ್ಲಿನ ಜೆಸ್ಕಾಂ ಉಪವಿಭಾಗ ಕಚೇರಿಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಫೆ. 11ರ ಒಳಗೆ 12 ಗಂಟೆ ಕಾಲ ಸಿಂಗಲ್ ಫೇಸ್ ಹಾಗೂ 10 ಗಂಟೆ ಕಾಲ ತ್ರೀಫೇಸ್ ವಿದ್ಯುತ್ ಪೂರೈಕೆ ವ್ಯವಸ್ಥೆ ಮಾಡದಿದ್ದರೆ ಅನಿರ್ದಿಷ್ಟಾವಧಿ ಕಾಲದವರೆಗೂ ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಎಂದು ರೈತರು ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್, ಜೆಸ್ಕಾಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ, ಮುತ್ತಿಗೆಯನ್ನು ಹಿಂದಕ್ಕೆ ಪಡೆದರು. ಇದಕ್ಕೂ ಮುನ್ನ ಮುತ್ತಿಗೆ ನಿರತರನ್ನು ಉದ್ದೇಶಿಸಿ ರಾಜ್ಯ ರೈತ ಸಂಘದ ಮುಖಂಡ ವರದಾಪುರ ಗೋಣಿಬಸಪ್ಪ ಮಾತನಾಡಿ, ರೈತರು ಸಂಕಷ್ಟದಲ್ಲಿದ್ದಾರೆ. ಕೂಡಲೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡುವ ಮೂಲಕ ರೈತರನ್ನು ರಕ್ಷಿಸಬೇಕು. ಪರಿಸ್ಥಿತಿ ಸುಧಾರಿಸದಿದ್ದರೆ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಸಂಪೂರ್ಣ ಬಂದ್ ಮಾಡಿ ಪ್ರತಿಭಟಿಸುವುದಾಗಿ ಗೋಣಿಬಸಪ್ಪ ಎಚ್ಚರಿಕೆ ನೀಡಿದರು. ಜಿಪಂ ಸದಸ್ಯ ರೋಗಣಿ ಹುಲುಗಪ್ಪ, ರೈತ ಸಂಘದ ಮುಖಂಡರಾದ ಸಿದ್ದನಗೌಡ, ಜಿ. ಸೂರ್ಯಬಾಬು, ಅಂಬಣ್ಣ, ಜಿಪಂ ಮಾಜಿ ಸದಸ್ಯ ಹಂಪಾಪಟ್ಟಣ ಭೀಮಣ್ಣ, ಕಾಂಗ್ರೆಸ್ ಮುಖಂಡರಾದ ವಿ. ಚಿನ್ನಾಪುರೆಪ್ಪ, ಪಿ. ಛತ್ರಪ್ಪ, ವಿದ್ಯುತ್ ಬಳಕೆದಾರರ ಸಂಘದ ಎ.ನಾಗರಾಜ, ಡಿ. ಶಿವಪ್ಪ, ಎ. ಪಂಪಾಪತಿ, ಎನ್. ಮದ್ದಾನಸ್ವಾಮಿ, ಚನ್ನಪ್ಪ, ವಿ. ಗಂಗಾಧರ, ಶಿವನಾಗಪ್ಪ, ಫಕ್ಕಿರಪ್ಪ, ಎ.ಕೆ. ಹುಲುಗಪ್ಪ, ಮಲ್ಲಪ್ಪ ಮರಬ್ಬಿಹಾಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

