ಮಾಲ್ವಿ ಜಲಾಶಯಕ್ಕೆ ನೀರು ಜೆಡಿಎಸ್ನಿಂದ ಮಾತ್ರ ಸಾಧ್ಯ
ಕನ್ನಡಪ್ರಭ ವಾರ್ತೆ, ಕೊಟ್ಟೂರು, ಫೆ. 6
ಮಾಲ್ವಿ ಜಲಾಶಯಕ್ಕೆ ಶಾಶ್ವತ ನೀರು ಒದಗಿಸುವ ಯೋಜನೆ ಜಾರಿಗೆ ಪಡೆಯುವುದು ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಸರ್ಕಾರದಿಂದ ಮಾತ್ರ ಸಾಧ್ಯ. ಇತರ ಪಕ್ಷಗಳಿಂದ ಇಂತಹ ಜನಪರ ಯೋಜನೆ ಕಾರ್ಯರೂಪ ಪಡೆಯುವುದು ಕನಸಿನ ಮಾತು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಸೂರ್ಯನಾರಾಯಣ ರೆಡ್ಡಿ ಹೇಳಿದರು.
ಇಲ್ಲಿಗೆ ಸಮೀಪದ ಕನ್ನನಾಯಕನಕಟ್ಟೆ ಗ್ರಾಮದಿಂದ ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಘಟಕ ಹಮ್ಮಿಕೊಂಡಿದ್ದ ಜನತಾದಳದ ನಡಿಗೆ ಜನರ ಬಳಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ವಿಧಾನಸಭೆಗೆ ಚುನಾವಣೆ ಘೋಷಣೆಯಾಗುವ ಈ ಗಳಿಗೆಯಲ್ಲಿ ಶಾಸಕ ಕೆ. ನೇಮಿರಾಜ್ ನಾಯ್ಕ್ ರು. 2 ಕೋಟಿ ಅನುದಾನವನ್ನು ಮಾಲ್ವಿ ಜಲಾಶಯಕ್ಕೆ ನೀರೊದಗಿಸುವ ಯೋಜನೆಗೆ ಸರ್ಕಾರ ಮಂಜೂರು ಮಾಡಿದೆ ಎಂದು ಹೇಳಿಕೆ ನೀಡಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಆರೋಪಿಸಿದರು.
ಸದಾ ಬೆಂಬಲ: ನಂದಿಪುರದ ಮಹೇಶ್ವರ ಸ್ವಾಮೀಜಿ ಮಾತನಾಡಿ, ನೀರು ತರುವ ಯಾವುದೇ ಯೋಜನೆಗೆ ಯಾವುದೇ ಪಕ್ಷ ಮುಂದಾದರೆ ಇಂತಹ ನಿಲುವುಗಳಿಗೆ ತಾವು ಸದಾ ಬೆಂಬಲವಾಗಿ ನಿಲ್ಲುತ್ತೇವೆ. ಮಾಲ್ವಿ ಜಲಾಶಯಕ್ಕೆ ನೀರು ತರುವ ಬದಲು ಹಿಂದಿನ ಜನಪ್ರತಿನಿಧಿಗಳು ದೊಡ್ಡ ಬಗೆಯ ಹಕ್ಕು ಕರ್ತವ್ಯಲೋಪವೆಸಗುವ ಮೂಲಕ ರೈತರಿಗೆ ದ್ರೋಹವೆಸಗಿದ್ದಾರೆ ಎಂದರು.
ಮರಿಯಮ್ಮನಹಳ್ಳಿಯ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಹಗರಿಬೊಮ್ಮನಹಳ್ಳಿಯ ಹಾಲಶಂಕರ ಸ್ವಾಮೀಜಿ, ಮಹಲ್ ಮಠದ ಶಂಕರ ಸ್ವಾಮೀಜಿ, ಬೆಣ್ಣಿಹಳ್ಳಿಯ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ, ಜೆಡಿಎಸ್ ಮುಖಂಡ ಮುಂಡ್ರಿಗಿ ನಾಗರಾಜ್, ಬನ್ನಿಗೋಳ ವೆಂಕಣ್ಣ, ಹರಾಳು ಬಸವನಗೌಡ, ಅಲ್ಪಸಂಖ್ಯಾತರ ಘಟಕದ ಸುಬಾನ್ಸಾಬ್, ಯುವ ಮುಖಂಡ ಎನ್. ಗೋಪಿ, ಫೋಟೋ ರಾಮಣ್ಣ ಇದ್ದರು. ಮಾತಾಗ್ಯಾಸ್ ಎರ್ರಿಸ್ವಾಮಿ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

