ಬಳ್ಳಾರಿ

ಇಂದು ಬೀಳ್ಕೊಡುಗೆ

Published On :

ಬಳ್ಳಾರಿ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಸಹಯೋಗದಲ್ಲಿ ಫೆ. 8ರಂದು ಬೆಳಗ್ಗೆ 10 ಗಂಟೆಗೆ ಪ್ರತಿಭಾ ದಿನಾಚರಣೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಏರ್ಪಡಿಸಲಾಗಿದೆ. ಇಲ್ಲಿನ ಕಮ್ಮರಚೇಡು ಕಲ್ಯಾಣ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕೆಎಂಎಫ್ ಅಧ್ಯಕ್ಷ ಜಿ. ಸೋಮಶೇಖರ ರೆಡ್ಡಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಾಲಕಿಯರ ಸರ್ಕಾರಿ ಪಪೂ ಕಾಲೇಜು ಪ್ರಾಚಾರ್ಯರು ಅಧ್ಯಕ್ಷತೆ ವಹಿಸಲಿದ್ದಾರೆ. ಪಾಲಿಕೆಯ ಮೇಯರ್ ಇಬ್ರಾಹಿಂಬಾಬು, ವಿಭೂತಿಗುಡ್ಡ ಮೈನ್ಸ್ ಎಂಡಿ ಎಸ್.ಕೆ. ಮೋದಿ, ಪಾಲಿಕೆ ಸದಸ್ಯ ಬಸವರಾಜ, ಶಶಿಕಲಾ, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಯು. ರಾಮಮೂರ್ತಿ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಲತಾ ಚೌದರಿ, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿನಿಯರು, ಕಾಲೇಜು ಅಭಿವೃದ್ಧಿ ಸಮಿತಿಯವರು ಮತ್ತಿತರರು ಉಪಸ್ಥಿತರಿರುತ್ತಾರೆ.
ನಾಳೆ ಹೃದಯ ತಪಾಸಣಾ ಶಿಬಿರ
ಬಳ್ಳಾರಿ: ವಿ. ಶ್ರೀಕೃಷ್ಣಮ್ಮ ಬಾಪಯ್ಯ ಸ್ಮಾರಕ ಶೈಕ್ಷಣಿಕ ಮತ್ತು ಚಾರಿಟೆಬಲ್ ಟ್ರಸ್ಟ್ ವತಿಯಿಂದ ನಾರಾಯಣ ಹೃದಯಾಲಯದ ನುರಿತ ವೈದ್ಯರಿಂದ ಉಚಿತ ಹೃದಯ ತಪಾಸಣಾ ಶಿಬಿರವನ್ನು ಫೆ. 9ರಂದು ಬೆಳಗ್ಗೆ 10 ಗಂಟೆಗೆ ಬಳ್ಳಾರಿಯ ವಿದ್ಯಾನಗರದ ಶ್ರೀ ನಂದ ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿದೆ. ಬಿಪಿಎಲ್ ಕಾರ್ಡ್, ಯಶಸ್ವಿನಿ ಕಾರ್ಡ್ ಹೊಂದಿರುವರು, ಸಾಮಾನ್ಯ ಜನತೆ ಶಿಬಿರದ ಸದುಪಯೋಗ ಪಡೆಯಬಹುದು. ಮಾಹಿತಿಗೆ ವಿ. ರಮಣಕುಮಾರ್-9036430093, 9448977323ಗೆ ಸಂಪರ್ಕಿಸಬಹುದು.
ಅರ್ಜಿ ಆಹ್ವಾನ
ಬಳ್ಳಾರಿ: ಸರ್ವ ಶಿಕ್ಷಣ ಅಭಿಯಾನದಡಿ 2012-13ನೇ ಸಾಲಿನಲ್ಲಿ 8ನೇ ತರಗತಿಗೆ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಅಂದರೆ 2013ರ ಜನವರಿ 1ರಿಂದ ಮಾರ್ಚ್ 31ರವರೆಗೆ ಮಾತ್ರ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಉಪನಿರ್ದೇಶಕರು ಮತ್ತು ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ತಿಳಿಸಿದ್ದಾರೆ. ಮಾಹಿತಿಗಾಗಿ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.