ಹಾಸ್ಟೆಲ್‌ನಲ್ಲಿ ಸೌಲಭ್ಯಕ್ಕಾಗಿ ಎಸ್‌ಎಫ್‌ಐ ಪ್ರತಿಭಟನೆ
ಹೊಸಪೇಟೆ: ತಾಲೂಕಿನ ಕಮಲಾಪುರದಲ್ಲಿ ಗುರುವಾರ ಎಸ್ಸಿ, ಎಸ್ಟಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಎಸ್‌ಎಫ್‌ಐ ಸಂಘಟನೆ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಹಾಸ್ಟೆಲ್ ಮುಂದೆ ಪ್ರತಿಭಟನಾ ಧರಣಿ ನಡೆಸಿದರು. ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಕೆ. ಸುರೇಶ್ ಚವ್ಹಾಣ್ ಮಾತನಾಡಿ, ಹಾಸ್ಟೆಲ್‌ನಲ್ಲಿ ಊಟದ ಅವ್ಯವಸ್ಥೆ ಸರಿಪಡಿಸಬೇಕು. ಪೌಷ್ಟಿಕ ಆಹಾರವನ್ನು ವಿದ್ಯಾರ್ಥಿಗಳಿಗೆ ನೀಡಬೇಕು. ಸರಿಯಾಗಿ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಎಸ್‌ಎಫ್‌ಐ ತಾಲೂಕು ಅಧ್ಯಕ್ಷ ಟಿ. ಶರತ್ ಕುಮಾರ್ ಮಾತನಾಡಿ, ಹಾಸ್ಟೆಲ್‌ನಲ್ಲಿ ಅನೇಕ ದಿನಗಳಿಂದಲೂ ಕುಡಿಯುವ ನೀರಿನ ವ್ಯವಸ್ಥೆ ಸರಿಯಿಲ್ಲ. ವಾರ್ಡನ್ ಹಾಗೂ ಅಡುಗೆಯವರು ವಿದ್ಯಾರ್ಥಿಗಳ ಜತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ತಮ್ಮ ವರ್ತನೆ ಸರಿಪಡಿಸಿಕೊಳ್ಳದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು. ಎಸ್‌ಎಫ್‌ಐ ತಾಲೂಕು ಉಪಾಧ್ಯಕ್ಷೆ ಎಸ್.ವಿ. ವಿಜಯಲಕ್ಷ್ಮಿ, ತಾಲೂಕು ಕಾರ್ಯದರ್ಶಿ ಪಂಪಾನಂದ, ಭೀಮರಾಜ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಕಾಶ್ ಮನವಿ ಪತ್ರ ಸ್ವೀಕರಿಸಿ, ಹಾಸ್ಟಲ್‌ನಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದಾಗಿ ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

