ಪುರಂದರ ದಾಸರ ಕೀರ್ತನೆ ಪ್ರಸ್ತುತ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಜ. 10
ಪುರಂದರ ದಾಸರು ರಚಿಸಿರುವ ಕೀರ್ತನೆಗಳು ಪ್ರಸ್ತುತವಾಗಿವೆ. ಅವರ ಕೀರ್ತನೆಗಳು ಉತ್ತಮ ಸಮಾಜ ನಿರ್ಮಾಣಕ್ಕೆ ನಾಂದಿಯಾಗಿವೆ ಎಂದು ಬಳ್ಳಾರಿ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಸುಮಂಗಳಮ್ಮ ಗುಬಾಜಿ ಹೇಳಿದರು.
ಹಂಪಿಯ ವಿರೂಪಾಕ್ಷೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ನಡೆದ ಪುರಂದರ ಉತ್ಸವ ಉದ್ಘಾಟಿಸಿ ಮಾತನಾಡಿದರು.
ಪುರಂದರ ದಾಸರು ಕನ್ನಡ ಸಾಹಿತ್ಯ, ಕರ್ನಾಟಕ ಸಂಗೀತ ಮತ್ತು ಭಾರತೀಯ ಸಂಸ್ಕೃತಿಗೆ ಮೌಲಿಕವಾದ ಕೊಡುಗೆ ನೀಡಿದ್ದಾರೆ. ಅವರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಮಹಾಕಾಯಕದಲ್ಲಿ ತೊಡಗಿಕೊಂಡಿದ್ದರು. ಮೂಢ ನಂಬಿಕೆಗಳನ್ನು ತೊರೆದು ವೈಜ್ಞಾನಿಕ ಮನೋಭಾವ ರೂಢಿಸಿಕೊಳ್ಳಲು ಪ್ರೇರಣೆ ನೀಡಿದವರಾಗಿದ್ದಾರೆ ಎಂದರು.
ಜಾತಿ, ಮತ, ಪಂಥಗಳನ್ನು ಮೀರಿನಿಂತು ಮಾನವೀಯ ಮೌಲ್ಯಗಳನ್ನು ತಮ್ಮ ಸಾಹಿತ್ಯದ ಮೂಲಕ ಅಭಿವ್ಯಕ್ತಿ ಪಡಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಅವಿರತವಾಗಿ ಶ್ರಮಿಸಿದ್ದಾರೆ ಎಂದು ಹೇಳಿದರು.
ಜಿಪಂ ಉಪಾಧ್ಯಕ್ಷೆ ಮಮತಾ ಸುರೇಶ್ ಜಿನಮಳ್ಳಿ ಮಾತನಾಡಿ, ಪುರಂದರ ದಾಸರು ಸಮಾಜದಲ್ಲಿರುವ ಮೂಢ ನಂಬಿಕೆಗಳನ್ನು ತೊಡೆದು ಹಾಕಲು ಶ್ರಮಿಸಿದರು. ಮಾನವೀಯ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಇಡೀ ಮಾನವ ಜನಾಂಗಕ್ಕೆ ಸಾರಿ ಹೇಳಿದ ಮಹಾನ್ ಸಾಧಕರಾಗಿದ್ದಾರೆ. ಇಂತಹ ಪುಣ್ಯ ಪುರುಷರ ಉತ್ಸವಗಳು ಪ್ರತಿಯೊಬ್ಬರು ಉತ್ತಮ ವ್ಯಕ್ತಿಗಳಾಗಲು ಪ್ರೇರೇಪಿಸುತ್ತವೆ ಎಂದರು.
ಗ್ರಾಪಂ ಅಧ್ಯಕ್ಷೆ ಸ್ವಾತಿ ಸಿಂಗ್ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯೆ ಅನಿತಾ ಬಿ. ಆನಂದ್, ತಾಪಂ ಸದಸ್ಯ ಭೀಮಾನಾಯ್ಕ, ಹಂಪಿ ಗ್ರಾಪಂ ಉಪಾಧ್ಯಕ್ಷೆ ರೇಣುಕಮ್ಮ, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್. ಚಂದ್ರಬಾಬು, ಬಿಜೆಪಿ ಮುಖಂಡ ಧರ್ಮೇಂದ್ರ ಸಿಂಗ್, ನಗರಸಭಾ ಸದಸ್ಯ ಎಸ್. ಗಾಳೆಪ್ಪ, ಸಹಾಯಕ ಆಯುಕ್ತ ಡಾ. ಡಿ.ಆರ್. ಅಶೋಕ್, ತಹಸೀಲ್ದಾರ್ ರಮೇಶ್, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿ ಪ್ರಾಣೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚೋರನೂರು ಕೊಟ್ರಪ್ಪ, ವಿರೂಪಾಕ್ಷೇಶ್ವರ ಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಪಿ.ಬಿ. ಮಹೇಶ್, ಸಿಪಿಐ ಕೆ. ಶಿವಾರೆಡ್ಡಿ, ಬಿಜೆಪಿ ಮುಖಂಡ ಅನಿಲ್ ಜೋಷಿ ಸೇರಿದಂತೆ ಇತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

