ಹರಿಹರ ಪೀಠ ಸಮಗ್ರ ಅಭಿವೃದ್ಧಿ
ಹಗರಿಬೊಮ್ಮನಹಳ್ಳಿ: ಸಮಾಜದ ದಾನಿಗಳಿಂದ ಸಂಗ್ರಹವಾದ ಮತ್ತು ಸರ್ಕಾರದಿಂದ ಬಂದಿರುವ ಅನುದಾನವನ್ನು ಸಂಪೂರ್ಣವಾಗಿ ಸದ್ಬಳಕೆ ಮಾಡಿಕೊಂಡು ಹರಿಹರದ ವೀರಶೈವ ಪಂಚಮಸಾಲಿ ಗುರುಪೀಠದ ಸರ್ವತೋಮುಖ ಅಭಿವೃದ್ಧಿ ಕಾರ್ಯ ಭರದಿಂದ ಸಾಗಿದೆ ಎಂದು ವೀರಶೈವ ಪಂಚಮಸಾಲಿ ಸಂಘದ ರಾಜ್ಯಾಧ್ಯಕ್ಷ ಬಸವರಾಜ ದಿಂಡೂರು ಹೇಳಿದರು.
ವೀರಶೈವ ಪಂಚಮಸಾಲಿ ಜಗದ್ಗುರುಗಳ 5ನೇ ವರ್ಷದ ಪೀಠಾರೋಹಣ ಮಹೋತ್ಸವದ ಆರಂಭದ ದಿನವಾದ ಗುರುವಾರ ಮಧ್ಯಾಹ್ನ ಪಟ್ಟಣದ ರಾಮನಗರದ ಕೆಚ್ಚಿನಬಂಡಿ ರಸ್ತೆ ಪಕ್ಕದಲ್ಲಿ ನಿರ್ಮಿಸಲಾಗಿರುವ ವಿಶೇಷ ವೇದಿಕೆಯಲ್ಲಿ ಜರುಗಿದ ವ್ಯಕ್ತಿತ್ವ ವಿಕಸನ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಹರಿಹರದಲ್ಲಿರುವ ಗುರುಪೀಠದ ಅಭಿವೃದ್ಧಿಗಾಗಿ ಅನುದಾನ ಬಿಡುಗಡೆ ಮಾಡಬೇಕೆಂದು ಸಮಾಜ ಸಲ್ಲಿಸಿದ ಬೇಡಿಕೆಯನ್ನು ಮನ್ನಿಸಿ ಈ ಬಜೆಟ್ನಲ್ಲಿ ರು. 5 ಕೋಟಿ ಅನುದಾನ ನೀಡಿರುವ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ರಾಜ್ಯ ಸರ್ಕಾರವನ್ನು ದಿಂಡೂರ ಅಭಿನಂದಿಸಿದರು.
ನಮ್ಮ ಜೊತೆ ಕೈಜೋಡಿಸಿ: ಗುರುಪೀಠ ಸ್ಥಾಪನೆಗೊಂಡು ಐದು ವರ್ಷ ಸಂದಿದ್ದು, ಅಲ್ಪಾವಧಿಯಲ್ಲಿ ರಾಜ್ಯಾದ್ಯಂತ ನಮ್ಮ ಸಂಘಟನೆಯನ್ನು ವಿಸ್ತಾರವಾಗಿ ಸಂಘಟಿಸುವ ಕೆಲಸವನ್ನು ತ್ವರಿತಗತಿಯಲ್ಲಿ ಮಾಡಲಾಗುತ್ತಿದೆ. ಇವತ್ತು ರಾಜ್ಯದಲ್ಲಿಯೇ ವೀರಶೈವ ಪಂಚಮಸಾಲಿ ಸಮಾಜವನ್ನು ಅತ್ಯಂತ ಬಲಿಷ್ಠ ಸಂಘಟನೆಯಾಗಿ ರೂಪಿಸುವ ಜವಾಬ್ದಾರಿ ಸಮಾಜದ ಎಲ್ಲರ ಮೇಲಿದೆ. ಅದನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಸಂಘಟನೆ ಮಾಡಲು ನಮ್ಮ ಜೊತೆ ಕೈಜೋಡಿಸಿ ಎಂದು ಕರೆ ನೀಡಿದರು.
ಸಮಾಜದ ಸ್ಥಿರ ಪೀಠಾಧಿಪತಿ ಶ್ರೀ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಿಜಾಪುರ ಜಿಲ್ಲೆಯ ಆರೂಢ ಮಠದ ಮಾತೆ ಯೋಗೀಶ್ವರಿ ತಾಯಿ ಸಮ್ಮುಖ ವಹಿಸಿದ್ದರು. ಸಮಾಜದ ಚಿತ್ರದುರ್ಗ ಜಿಲ್ಲಾಧ್ಯಕ್ಷ ಎಚ್. ನಾಗರಾಜ, ನಿಕಟಪೂರ್ವ ರಾಜ್ಯಾಧ್ಯಕ್ಷ ಬಾವಿ ಬೆಟ್ಟಪ್ಪ, ಬಳ್ಳಾರಿ ಜಿಲ್ಲಾಧ್ಯಕ್ಷ ಬಿ. ಕುಮಾರಸ್ವಾಮಿ, ನೌಕರರ ಸಂಘದ ರಾಜ್ಯಾಧ್ಯಕ್ಷ ಸೋಮನಗೌಡ ಪಾಟೀಲ್, ತಾಲೂಕಾಧ್ಯಕ್ಷ ಅಕ್ಕಿ ಶಿವಣ್ಣ, ರಾಜ್ಯ ಯುವ ಘಟಕದ ಅಧ್ಯಕ್ಷ ಹನಸಿ ಸಿದ್ದೇಶ, ತಾಲೂಕಾಧ್ಯಕ್ಷ ಬ್ಯಾಡಗಿ ರಾಜೇಶ, ನೇತಾಜಿಗೌಡ, ವೀರಭದ್ರಪ್ಪ, ಎಚ್.ಪಿ. ಶಿವಶಂಕರಗೌಡ, ಭದ್ರವಾಡಿ ವಿನಾಯಕ ಇದ್ದರು. ಲಿಂಗನಗೌಡ ಸ್ವಾಗತಿಸಿ, ಎಚ್.ಎಸ್. ಕೊಟ್ರೇಶ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

