ಶಾಶ್ವತ ನೀರಾವರಿ ಯೋಜನೆಯಿಂದ ಬಡತನ ನಿರ್ಮೂಲನೆ
ಹಗರಿಬೊಮ್ಮನಹಳ್ಳಿ: ರೈತರ ಒಣಭೂಮಿಗೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸುವ ಯೋಜನೆಗಳ ಜಾರಿಯಿಂದ ಮಾತ್ರ ಬಡತನ, ದಾರಿದ್ರ್ಯ ನಿರ್ಮೂಲನೆ ಸಾಧ್ಯ. ಶಾಸಕತ್ವ ಅವಧಿಯುದ್ದಕ್ಕೂ ಕ್ಷೇತ್ರದಲ್ಲಿ ಶಾಶ್ವತ ನೀರಾವರಿ ಯೋಜನೆಯ ಜಾರಿಗೆ ಮೊದಲ ಆದ್ಯತೆ ನೀಡಿ ಕಾರ್ಯನಿರ್ವಹಿಸಿರುವೆ ಎಂದು ಶಾಸಕ ಕೆ. ನೇಮಿರಾಜ ನಾಯ್ಕ ಹೇಳಿದರು.
ವೀರಶೈವ ಪಂಚಮಸಾಲಿ ಜಗದ್ಗುರುಗಳ 5ನೇ ಪೀಠಾರೋಹಣ ಮಹೋತ್ಸವದ ನಿಮಿತ್ತ ಶುಕ್ರವಾರ ಮಧ್ಯಾಹ್ನ ಪಟ್ಟಣದ ರಾಮನಗರದ ಕೆಚ್ಚಿನಬಂಡಿ ರಸ್ತೆಯ ಪಕ್ಕದಲ್ಲಿ ನಿರ್ಮಾಣವಾಗಿರುವ ವೇದಿಕೆಯಲ್ಲಿ ವೀರಶೈವ ಪಂಚಮಸಾಲಿ ಸಮಾಜದವರಿಗಾಗಿ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು. ಪರಮಶಿವಯ್ಯ ವರದಿಯ ಸಂಪೂರ್ಣ ಅನುಷ್ಠಾನದಿಂದ ಮಾತ್ರ ಮಧ್ಯ ಹಾಗೂ ಬಯಲುಸೀಮೆ ಕರ್ನಾಟಕದ ಭಾಗದಲ್ಲಿನ ರೈತರ ಒಣಭೂಮಿ ಪ್ರದೇಶಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಿ ಈ ಭಾಗದ ರೈತರ ಹಿತರಕ್ಷಣೆ ಮಾಡಲು ಸಾಧ್ಯ. ಪರಮಶಿವಯ್ಯ ವರದಿ ಅನುಷ್ಠಾನಕ್ಕೆ ಅಧಿವೇಶನದ ವೇಳೆಯಲ್ಲಿ ಒತ್ತಾಯಿಸಿರುವುದಾಗಿ ಅವರು ಹೇಳಿದರು.
15 ಜೋಡಿಗಳು ಸ್ವಾಮೀಜಿಗಳು, ಜನಪ್ರತಿನಿಧಿಗಳು, ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಸಮಾಜದ ಬಂಧುಗಳ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಪಂಚಮಸಾಲಿ ಗುರುಪೀಠದ ಸ್ಥಿರ ಪೀಠಾಧೀಶ ಶ್ರೀಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವೀರಶೈವ ಪಂಚಮಸಾಲಿ ರಾಜ್ಯ ಮಹಿಳಾ ಘಟಕದ ಗೌರವಾಧ್ಯಕ್ಷೆ ನೀಲಮ್ಮ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯಘಟಕದ ಅಧ್ಯಕ್ಷೆ ಪೂರ್ಣಿಮಾ ಬೆನ್ನೂರು, ವೀಣಾ ನೇಮಿರಾಜನಾಯ್ಕ, ಬಾವಿ ಪುಷ್ಪಾಲೀಲಾ, ರಾಜ್ಯಾಧ್ಯಕ್ಷ ಬಸವರಾಜ ದಿಂಡೂರ, ನಿಕಟಪೂರ್ವ ಗೌರವಾಧ್ಯಕ್ಷ ಬಾವಿ ಬೆಟ್ಟಪ್ಪ, ತಾಲೂಕಾಧ್ಯಕ್ಷ ಅಕ್ಕಿ ಶಿವಣ್ಣ, ಜಿಲ್ಲಾಧ್ಯಕ್ಷ ಬಿ. ಕುಮಾರಸ್ವಾಮಿ, ರಾಜ್ಯ ಯುವ ಘಟಕದ ಅಧ್ಯಕ್ಷ ಹನಸಿ ಸಿದ್ದೇಶ, ತಾಲೂಕು ಯುವ ಘಟಕದ ಅಧ್ಯಕ್ಷ ಬ್ಯಾಡಗಿ ರಾಜೇಶ, ಇಟಿಗಿ ಕಲ್ಲೇಶಪ್ಪ, ಎಚ್.ಪಿ. ಶಿವಶಂಕರಗೌಡ, ಉಪ್ಪಾರಗಟ್ಟಿ ವೀರನಗೌಡ, ಯು.ಕೆ. ಕೊಟ್ರೇಶ್, ಭದ್ರವಾಡಿ ವಿನಯಕುಮಾರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

