ಬಳ್ಳಾರಿ

ಹೂವಿನಹಡಗಲಿ: ಗ್ರಾಪಂ ನೌಕರರಿಂದ ಧರಣಿ

Published On :

ಹೂವಿನಹಡಗಲಿ: ಬೆಲೆ ಏರಿಕೆ ಖಂಡಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ತಾಲೂಕಿನ 24 ಗ್ರಾಮ ಪಂಚಾಯಿತಿಗಳ ಕಾರ್ಮಿಕರು ತಾಪಂ ಆವರಣದಲ್ಲಿ ಧರಣಿ ಮಾಡಿದರು.
ಗ್ರಾಪಂ ನೌಕರರ ಸಂಘದ ಅಧ್ಯಕ್ಷ ಯು. ಮೂಕಪ್ಪ ಮಾತನಾಡಿ, ಕುಡಿಯುವ ನೀರು, ಸ್ವಚ್ಛತೆ, ಬೀದಿ ದೀಪ, ಚರಂಡಿ ಸ್ವಚ್ಛತೆ ಮತ್ತಿತರ ಮೂಲಸೌಲಭ್ಯ ಅನುಷ್ಠಾನ ಕಾರ್ಯದಲ್ಲಿ ಸಾವಿರಾರು ಕಾರ್ಮಿಕರು ತೊಡಗಿಸಿಕೊಂಡಿದ್ದಾರೆ. ತಾಲೂಕಿನಲ್ಲಿ ಸುಮಾರು 240 ಸಿಬ್ಬಂದಿ ಬಿಲ್ ಕಲೆಕ್ಟರ್, ನೀರು ಗಂಟಿ, ಜವಾನ, ಸ್ವೀಪರ್‌ಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಎಲ್ಲ ನೌಕರರಿಗೆ ಸರಿಯಾಗಿ ಸರ್ಕಾರಿ ಸೌಲಭ್ಯಗಳು ದೊರೆಯುತ್ತಿಲ್ಲ. ಬೆಲೆ ಏರಿಕೆ ಹೊಡೆತಕ್ಕೆ ತತ್ತರಿಸಿ ಹೋಗಿದ್ದು, ಕುಟುಂಬ ನಿರ್ವಹಣೆ ಮಾಡುವುದು ಕಷ್ಟಸಾಧ್ಯವಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಬೆಲೆ ಏರಿಕೆ ನಿಯಂತ್ರಣಕ್ಕೆ ನಿರ್ದಿಷ್ಟ ಕ್ರಮ ಕೈಗೊಳ್ಳಬೇಕು. ಗ್ರಾಪಂ ನೌಕರರ ಸಂಬಳ ರು. 10 ಸಾವಿರಕ್ಕೆ ಕಡಿಮೆ ಇಲ್ಲದಂತೆ ಏರಿಸಬೇಕು. ವೇತನಕ್ಕಾಗಿ ಪ್ರತ್ಯೇಕ ಅನುದಾನ ಬಿಡುಗಡೆ ಮಾಡಬೇಕು. ಗ್ರಾಪಂ ಸಿಬ್ಬಂದಿ ವೇತನಕ್ಕಾಗಿ ಬಿಡುಗಡೆ ಮಾಡುವ ಶೇ. 40ರ ಅಭಿವೃದ್ಧಿ ಅನುದಾನವನ್ನು ವೇತನಕ್ಕಾಗಿ ಕಾಯ್ದಿರಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆ ಈಡೇರಿಸಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಿದ್ಧೇಶ್ವರ ಅವರಿಗೆ ಮನವಿ ಸಲ್ಲಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.