ಸಂಡೂರು ಪುರಸಭೆ: 81 ಅಭ್ಯರ್ಥಿಗಳು ಕಣದಲ್ಲಿ
ಸಂಡೂರು: ಸಂಡೂರು ಪುರಸಭೆಗೆ ನಡೆಯಲಿರುವ ಚುನಾವಣೆಗೆ ಒಟ್ಟು 88 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾದ ಬುಧವಾರ 7 ಅಭ್ಯರ್ಥಿಗಳು (ಬಿಜೆಪಿಯ ಒಬ್ಬರು, ಬಿಎಸ್‌ಆರ್ ಕಾಂಗ್ರೆಸ್‌ನ 6) ನಾಮಪತ್ರ ಹಿಂಪಡೆದಿದ್ದಾರೆ. ಒಟ್ಟು 81 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ. ಸಂಡೂರು ಪುರಸಭೆಯ 7ನೇ ವಾರ್ಡ್‌ನಲ್ಲಿ ಜೆಡಿಎಸ್‌ನಿಂದ ಸ್ಪರ್ಧಿಸಿರುವ ಕೆ. ಶಂಭುಲಿಂಗ ಅವರಿಗೆ ನೀಡಲಾಗಿದ್ದ ಜಾತಿ ಹಾಗೂ ಪ್ರವರ್ಗ ಪ್ರಮಾಣಪತ್ರವನ್ನು ಅಸಿಂಧುಗೊಳಿಸಿ ತಹಸೀಲ್ದಾರ್ ಹೊರಡಿಸಿದ್ದ ಆದೇಶಕ್ಕೆ ಸಹಾಯಕ ಆಯುಕ್ತರು ತಡೆಯಾಜ್ಞೆ ನೀಡಿರುವುದರಿಂದ, ಕೆ. ಶಂಭುಲಿಂಗ ಅವರು ಸಲ್ಲಿಸಿದ ನಾಮಪತ್ರವೂ ಸ್ವೀಕೃತವಾಗಿದೆ. ಸಹಾಯಕ ಆಯುಕ್ತರು ಪ್ರಮಾಣಪತ್ರ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ತಡೆಯಾಜ್ಞೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

