ಬಳ್ಳಾರಿ

ವರದಕ್ಷಿಣೆ ಕಿರುಕುಳ: ಗೃಹಿಣಿ ಆತ್ಮಹತ್ಯೆ

Published On :

ಬಳ್ಳಾರಿ: ವರದಕ್ಷಿಣೆ ಕಿರುಕುಳದ ಹಿನ್ನೆಲೆಯಲ್ಲಿ ಗೃಹಿಣಿಯೋರ್ವಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿರುಗುಪ್ಪ ರಸ್ತೆಯಲ್ಲಿ ನಡೆದಿದೆ. ಮೃತಳನ್ನು ಧನಲಕ್ಷ್ಮಿ (25) ಎಂದು ಗುರುತಿಸಲಾಗಿದೆ. ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿರುವ ಹಿನ್ನೆಲೆಯಲ್ಲಿ ಧನಲಕ್ಷ್ಮಿಯನ್ನು ಕೊಲೆ ಮಾಡಿ ನೇಣು ಹಾಕಲಾಗಿದೆ ಎಂದು ಮೃತಳ ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಬಳ್ಳಾರಿ ಗ್ರಾಮೀಣ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ. ಆಂಧ್ರಪ್ರದೇಶ ಪೆದ್ದಟೂರು ಮೃತಳ ತವರೂರಾಗಿದೆ. ಬುಧವಾರ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯೊಳಗೆ ಈ ಕೃತ್ಯ ನಡೆದಿದೆ. ಆರು ವರ್ಷಗಳ ಹಿಂದೆ ಈಕೆಯ ವಿವಾಹವಾಗಿತ್ತು. 3 ವರ್ಷ ಹಾಗೂ ನಾಲ್ಕು ವರ್ಷದ ಇಬ್ಬರು ಮಕ್ಕಳಿದ್ದಾರೆ.

ಅವಧಿ ವಿಸ್ತರಣೆ
ಬಳ್ಳಾರಿ: ಬಳ್ಳಾರಿ ವಿಭಾಗದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯಲ್ಲಿರುವ ಬಳ್ಳಾರಿ, ಸಿರುಗುಪ್ಪ ತಾಲೂಕುಗಳ ಅಂಗವಿಕಲರಿಗೆ 2012ರಲ್ಲಿ ವಿತರಿಸಿದ ರಿಯಾಯಿತಿ ಬಸ್ ಪಾಸಿನ ನವೀಕರಣ ಅವಧಿಯನ್ನು ಮಾ. 31ರವರೆಗೂ ವಿಸ್ತರಿಸಲಾಗಿದೆ. ಆಡಳಿತಾತ್ಮಕ ಕಾರಣಗಳಿಂದ ಮಾ. 31ರವರೆಗೆ ಪುನಃ ವಿಸ್ತರಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ದುರ್ಗಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.