ಬಳ್ಳಾರಿ

ರೋಗಮುಕ್ತ ಸಮಾಜ ನಿರ್ಮಾಣವೇ ಗುರಿ

Published On :

ಬಳ್ಳಾರಿ: ರೋಗಮುಕ್ತ ಸಮಾಜ ನಿರ್ಮಾಣ ಮಾಡುವುದು ಟಚ್ ಫಾರ್ ಲೈಫ್ ಫೌಂಡೇಷನ್‌ನ ಉದ್ದೇಶವಾಗಿದೆ ಎಂದು ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ನಾರಾ ಭರತರೆಡ್ಡಿ ಹೇಳಿದರು.
ಟಚ್ ಫಾರ್ ಲೈಫ್ ಫೌಂಡೇಷನ್ ವತಿಯಿಂದ ಇಲ್ಲಿನ ಗಾಂಧಿ ನಗರದ ಮದ್ದಿಕೇರಿ ಭೀಮಯ್ಯ ಮತ್ತು ಸೊಂತಲಿಂಗಣ್ಣಶೆಟ್ಟಿ ಫ್ರೌಢಶಾಲೆ ಅವರಣ ಹಾಗೂ ತಾಳೂರು ರಸ್ತೆಯ ಶಾಂತಿ ಶಿಶು ವಿಹಾರ ಶಾಲೆ ಅವರಣದಲ್ಲಿ ಸೋಮವಾರ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ಔಷಧಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿಸಿದರು.
ನಾಡಿನಲ್ಲಿರುವ ದೀನ-ದುರ್ಬಲರ ಆರೋಗ್ಯದ ಕಡೆ ಗಮನಹರಿಸಿರುವ ಸಂಸ್ಥೆಯು ಪ್ರಥಮ ಅಂತವಾಗಿ ನಗರದ ವಿವಿಧ ಪ್ರದೇಶಗಳಲ್ಲಿ ಇಂದಿನಿಂದ ಒಂದು ತಿಂಗಗಳ ಕಾಲ ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿ ಬಡವರ ಸಹಾಯಕ್ಕೆ ದಾವಿಸಲಾಗುವುದೆಂದು ತಿಳಿಸಿದರು.
ಎರಡು ಕಡೆ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಸುಮಾರು 3 ಸಾವಿರ ಜನರ ಆರೋಗ್ಯ ತಪಾಸಣೆ ನಡೆಸಿ, ಎಲ್ಲರಿಗೂ ಔಷಧಿ ವಿತರಿಸಲಾಯಿತು. ಮುಂದಿನ ದಿನಗಳಲ್ಲಿ ನಗರದಲ್ಲಿ ಸುಮಾರು 20 ರಿಂದ 25 ಸಾವಿರಕ್ಕೂ ಹೆಚ್ಚು ಜನರಿಗೆ ಅನೂಕುಲವಾಗುವ ರೀತಿಯಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ನೆಡಸಲಾಗುವುದು ಎಂದು ನಾರಾ ಭರತರೆಡ್ಡಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.