ಆರ್ ಟಿಇ ಮಾಹಿತಿ ಕೇಂದ್ರ ಆರಂಭ (ಸುದ್ದಿ ಸಂಕ್ಷೇಪ)
ಬಳ್ಳಾರಿ: ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಅಧಿನಿಯಮ 2009ರನ್ವಯ 2013-14ನೇ ಸಾಲಿಗಾಗಿ ಮಕ್ಕಳನ್ನು ಶಾಲೆಗೆ ದಾಖಲಿಸುವ ಕುರಿತು ಸಾರ್ವಜನಿಕರ ಮಾಹಿತಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಜ. 5ರಿಂದಲೇ ಆರ್ಟಿಇ ಮಾಹಿತಿ ಕೇಂದ್ರವನ್ನು ತೆರೆಯಲಾಗಿದೆ ಎಂದು ಉಪನಿರ್ದೇಶಕ ಟಿ. ನಾರಾಯಣಗೌಡ ತಿಳಿಸಿದ್ದಾರೆ. ಕೇಂದ್ರವು ಸಾರ್ವಜನಿಕ ರಜೆಗಳನ್ನು ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5.30ರ ವರೆಗೆ ಕಾರ್ಯನಿರ್ವಹಿಸುತ್ತದೆ. ಮಕ್ಕಳ ಪಾಲಕ-ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ದಾಖಲು ಮಾಡುವ ಬಗ್ಗೆ ಮಾಹಿತಿ ಕೇಂದ್ರದ ಮೂಲಕ ಸೂಕ್ತ ಮತ್ತು ಖಚಿತ ಮಾಹಿತಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 1800-425-11009ಕ್ಕೆ ಉಚಿತ ಕರೆ ಮಾಡಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಷ್ಟ್ರ ಪ್ರಶಸ್ತಿಗೆ ಆಹ್ವಾನ
ಬಳ್ಳಾರಿ: ಕೇಂದ್ರ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಮಾಡಿರುವ ಕೆಲಸದ ಗುಣ ಮಟ್ಟದ ಮೇಲೆ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಸಂಘ ಸಂಸ್ಥೆಗಳಲ್ಲಿ ವೇತನ ಪಡೆಯುವ ವ್ಯಕ್ತಿಗಳು ಅರ್ಜಿ ಸಲ್ಲಿಸುವಂತಿಲ್ಲ. ಆಯ್ಕೆಯಾದ ಪ್ರತಿ ವ್ಯಕ್ತಿಗೆ ಒಂದು ಲಕ್ಷ ರು. ನಗದು ಹಾಗೂ ಪ್ರಶಸ್ತಿ ಪತ್ರ, ಆಯ್ಕೆಯಾದ ಪ್ರತಿ ಸಂಸ್ಥೆಗೆ ರು. 3 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಲಾಗುವುದು. ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟ ಸಮಿತಿಯು ಪ್ರಶಸ್ತಿಗೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿದ ನಂತರ ಆಯ್ಕೆಯಾದ ಅರ್ಜಿಗಳನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಆಸಕ್ತರು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಳ್ಳಾರಿ ಇವರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಇದೇ ಕಚೇರಿಗೆ ಫೆ. 28ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಸಂಪರ್ಕಿಸಬೇಕೆಂದು ಉಪನಿರ್ದೇಶಕ ಬಿ.ಎಸ್. ಕಲಾದಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

