ಬಳ್ಳಾರಿ: ರಾಜೀವ್ಗಾಂಧಿ ಮಾನವ ಸೇವಾ ಪ್ರಶಸ್ತಿ ನೀಡಲು ಮಕ್ಕಳ ಕಲ್ಯಾಣಕ್ಕಾಗಿ 10 ವರ್ಷಗಳಿಗೂ ಮೇಲ್ಪಟ್ಟು ಉತ್ತಮ ಸೇವೆಯನ್ನು ಸಲ್ಲಿಸಿರುವ ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರ್ಕಾರವು ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಗುಣಮಟ್ಟದ ಕೆಲಸಗಳನ್ನು ಮಾಡಿದ ವ್ಯಕ್ತಿಗಳನ್ನು ಗುರುತಿಸಿ, ಪ್ರತಿ ವರ್ಷ ರಾಜೀವ್ ಗಾಂಧಿ ಅವರ ಜನ್ಮ ದಿನವಾದ ಆ. 20ರಂದು ಈ ಪ್ರಶಸ್ತಿ ನೀಡಲಾಗುವುದು. ಪ್ರಶಸ್ತಿಯು ರು. 1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ಸಂಘ ಸಂಸ್ಥೆಗಳಲ್ಲಿ ಸಂಬಳ ಪಡೆಯುತ್ತಿರುವ ಅಧಿಕಾರಿಗಳು ಈ ಪ್ರಶಸ್ತಿಯ ಆಯ್ಕೆಗೆ ಅರ್ಹರಿರುವುದಿಲ್ಲ. ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ 3 ವ್ಯಕ್ತಿಗಳಿಗೆ ಮಾತ್ರ ಪ್ರಶಸ್ತಿ ನೀಡಲಾಗುವುದು. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ವ್ಯಕ್ತಿಗಳು ಆಯ್ಕೆ ಮಾಡಿರುವ ಕೆಲಸದ ಗುಣಮಟ್ಟದ ಮೇಲೆ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟ ಸಮಿತಿಯು ಪ್ರಶಸ್ತಿಗೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿದ ನಂತರ ಆಯ್ಕೆಯಾದ ಅರ್ಜಿಗಳನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಆಸಕ್ತರು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಳ್ಳಾರಿ ಇವರ ಕಚೇರಿಯಿಂದ ನಿಗದಿತ ಅರ್ಜಿ ನಮೂನೆ ಪಡೆದು ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಇದೇ ಕಚೇರಿಗೆ ಫೆ. 28ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಸಂಪರ್ಕಿಸಬೇಕೆಂದು ಉಪನಿರ್ದೇಶಕ ಬಿ.ಎಸ್. ಕಲಾದಗಿ ತಿಳಿಸಿದ್ದಾರೆ.