ಪ್ರತಿಭಾವಂತರು ದೇಶಕ್ಕೆ ಕೊಡುಗೆ ನೀಡಲಿ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಜ. 22
ನಮ್ಮ ದೇಶ ವೈಜ್ಞಾನಿಕವಾಗಿ ಸಾಕಷ್ಟು ಅಭಿವೃದ್ಧಿ ಹೊಂದುತ್ತಿದೆ. ಬೇರೆ ದೇಶಗಳಿಗೆ ಅತಿ ಹೆಚ್ಚು ವಿಜ್ಞಾನಿಗಳನ್ನು ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಕೆ. ನೇಮಿರಾಜ್ ನಾಯ್ಕ ಹೇಳಿದರು.
ತಾಲೂಕಿನ ಮರಿಯಮ್ಮನಹಳ್ಳಿಯ ವಿನಾಯಕ ಹಿರಿಯ ಪ್ರಾಥಮಿಕ, ಆಂಗ್ಲ ಮಾಧ್ಯಮ ಶಾಲೆ ಹಾಗೂ ಪ್ರಿಯದರ್ಶಿನಿ ಪ್ರೌಢಶಾಲೆ ಆಶ್ರಯದಲ್ಲಿ ಆರಂಭವಾದ ಎರಡು ದಿನಗಳ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ದೇಶದ ವಿದ್ಯಾವಂತರು, ವೈದ್ಯರು, ಎಂಜಿನಿಯರ್‌ಗಳಿಗೆ ಬೇರೆ ದೇಶಗಳಲ್ಲಿ ಬೇಡಿಕೆ ಇದೆ. ಪ್ರತಿಭಾವಂತರು ದೇಶಕ್ಕೆ ಉಪಯುಕ್ತವಾಗುವಂತಹ ಕಾರ್ಯ ಮಾಡಿದಾಗ ದೇಶ ಮತ್ತಷ್ಟು ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಮರಿಯಮ್ಮನಹಳ್ಳಿಯ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಮಾರಂಭದ ಸಾನ್ನಿಧ್ಯ ವಹಿಸಿದ್ದರು. ಸ್ಥಳೀಯ ಎಸ್‌ಎಲ್‌ಎನ್‌ಎ ಸಂಸ್ಥೆ ಅಧ್ಯಕ್ಷ ಎನ್. ಸತ್ಯನಾರಾಯಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಗ್ರಾಪಂ ಉಪಾಧ್ಯಕ್ಷ, ಬಿಜೆಪಿ ಮುಖಂಡ ಡಿ. ರಾಘವೇಂದ್ರ ಶೆಟ್ಟಿ, ಹಗರಿಬೊಮ್ಮನಹಳ್ಳಿ ತಾಪಂ ಮಾಜಿ ಅಧ್ಯಕ್ಷ ಪಿ. ಸೂರ್ಯಬಾಬು ಮಾತನಾಡಿದರು.
ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಕೆ. ಲಕ್ಷ್ಮಣ, ಪ್ರಿಯದರ್ಶಿನಿ ಕಾಲೇಜಿನ ಪ್ರಾಚಾರ್ಯ ಎಂ. ಅಶೋಕ್, ಪ್ರಿಯದರ್ಶಿನಿ ಪ್ರೌಢಶಾಲೆಯ ಮುಖ್ಯಗುರು ಬಿ. ಯಮುನೂರಪ್ಪ, ಸ್ಥಳೀಯ ಗ್ರಾಪಂ ಅಧ್ಯಕ್ಷ ಎಸ್. ಸುಭಾನ್, ಗ್ರಾಪಂ ಸದಸ್ಯ ಬಿ. ಯಮುನೂರ, ಸ್ಥಳೀಯ ಮುಖಂಡರಾದ ಎಂ. ಬದ್ರಿನಾಥ ಶೆಟ್ಟಿ, ಡಿಶ್ ಮಂಜುನಾಥ, ಸಿಆರ್‌ಪಿ ಮೇಘನಾ, ಶಿಕ್ಷಕರಾದ ಕೆ. ಮಂಜುನಾಥ, ಕೆ. ವೆಂಕಟೇಶ, ಹನುಮಂತಪ್ಪ, ಅನ್ನಪೂರ್ಣಾ, ರಜಿನಿ, ಎಎಸ್‌ಐ ಸತ್ಯನಾರಾಯಣ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

