ರಾಜಿನಾಮೆ ಆಟ ಫಲಿಸುವುದಿಲ್ಲ: ನೇಮಿರಾಜ್
ಹಗರಿಬೊಮ್ಮನಹಳ್ಳಿ: ದಶಕಗಳ ನಂತರ ಉತ್ತರ ಕರ್ನಾಟಕಕ್ಕೆ ಮುಖ್ಯಮಂತ್ರಿ ಸ್ಥಾನ ಲಭಿಸಿದ್ದು, ಜಗದೀಶ್ ಶೆಟ್ಟರ್ ಸಿಕ್ಕಿರುವ ಅಧಿಕಾರವನ್ನು ರಾಜ್ಯದ ಜೊತೆ ಮುಖ್ಯವಾಗಿ ಉತ್ತರ ಕರ್ನಾಟಕ ಅಭಿವೃದ್ಧಿಗಾಗಿ ಸಮರ್ಥ ರೀತಿ ಬಳಸುತ್ತಿದ್ದಾರೆ. ಉ-ಕದ ಮುಖ್ಯಮಂತ್ರಿಯೊಬ್ಬರನ್ನು ಅಧಿಕಾರದಿಂದ ಕೆಳಗಿಳಿಸಲು ನಡೆಯುತ್ತಿರುವ ರಾಜಿನಾಮೆ ಆಟವನ್ನು ಜನತೆ ಕ್ಷಮಿಸಲಾರರು ಎಂದು ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಕೆ. ನೇಮಿರಾಜನಾಯ್ಕ ಹೇಳಿದ್ದಾರೆ.
ತಾಲೂಕಿನ ಎಂಬಿ ಕಾಲೋನಿ ಬಳಿ ನೂತನವಾಗಿ ನಿರ್ಮಾಣವಾಗಿರುವ ಅಗ್ನಿಶಾಮಕ ಠಾಣೆ ಹಾಗೂ ಅಧಿಕಾರಿ ಸಿಬ್ಬಂದಿ ವರ್ಗದ ವಸತಿ ಸಮುಚ್ಛಯ ಉದ್ಘಾಟಿಸಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದರು.
ಶೆಟ್ಟರ್ ಬಜೆಟ್ ಮಂಡನೆ: ಬಹು ದಿನಗಳಿಂದ ಉತ್ತರ ಕರ್ನಾಟಕ ಭಾಗಕ್ಕೆ ಆಗುತ್ತಿದ್ದ ಅನ್ಯಾಯವನ್ನು ತೊಡೆದು ಹಾಕುವಲ್ಲಿ ಶೆಟ್ಟರ್ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಏನೇ ಸಂಕಷ್ಟಗಳು ಎದುರಾದರು ಅವುಗಳನ್ನೆಲ್ಲ ಯಶಸ್ವಿಯಾಗಿ ದಾಟಿ ಈ ಸಲ ಸಿಎಂ ಶೆಟ್ಟರ್ ಬಜೆಟ್ ಮಂಡಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶೆಟ್ಟರ್ ಬಜೆಟ್ ಮಂಡನೆ ಮಾಡುತ್ತಾರೆ. ಅನುಮಾನಬೇಡ. ಈಗಾಗಲೇ ಪಕ್ಷದ ವರಿಷ್ಠರು ಹಾಗೂ ಮುಖ್ಯಮಂತ್ರಿ ಬಜೆಟ್ ಮಂಡನೆಗೆ ಸಂಬಂಧಿಸಿದಂತೆ ತೆಗೆದುಕೊಳ್ಳಬೇಕಾದ ಎಲ್ಲ ಪೂರ್ವ ತಯಾರಿ ಮಾಡಿಕೊಂಡಿದ್ದಾರೆ. ಶೆಟ್ಟರ್ ಖಂಡಿತ ಬಜೆಟ್ ಮಂಡಿಸುತ್ತಾರೆ ಎಂದರು. ತಾವು ಬಿಜೆಪಿಯಲ್ಲಿಯೇ ಇರುವುದಾಗಿ ಇದೇ ಸಮಯ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

