ಲೈಂಗಿಕ ಕಿರುಕುಳ ವಿರೋಧಿ ಸಮಿತಿ ರಚಿಸಿ: ಆಗ್ರಹ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಜ. 24
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ಶಾಲಾ- ಕಾಲೇಜುಗಳಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿ ರಚಿಸುವಂತೆ ಹಂಪಿ ಕನ್ನಡ ವಿಶ್ವವಿದ್ಯಾಲಯದ ಡಾ ರಾಜ್ಕುಮಾರ್ ಅಧ್ಯಯನ ಪೀಠದ ಸಂಚಾಲಕ ಡಾ ಸಿ.ಆರ್. ಗೋವಿಂದ್ರಾಜ್ ಸರ್ಕಾರವನ್ನು ಒತ್ತಾಯಿಸಿದರು.
ತಾಲೂಕಿನಲ್ಲಿ ಲೈಂಗಿಕ ಕಿರುಕುಳ ವಿರೋಧಿ ಸಮಿತಿ ರಚಿಸಲು ಆಗ್ರಹಿಸಿ ಮತ್ತು ಸರ್ಕಾರಿ ಪದವಿ ಕಾಲೇಜಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಮತ್ತು ತಾಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತಾಯಿಸಿ ನಗರದ ಯಾತ್ರಿ ನಿವಾಸದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಹಮ್ಮಿಕೊಂಡಿದ್ದ ತಾಲೂಕು ಸಮ್ಮೇಳವನ್ನು ಉದ್ಘಾಟಿಸಿದ ಅವರು, ತಾಲೂಕಿನ ಬಡ ವಿದ್ಯಾರ್ಥಿಗಳ ಆಶಾಕಿರಣವಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಸ್ವಂತ ಕಟ್ಟಡ ಶೀಘ್ರದಲ್ಲಿಯೇ ಆರಂಭವಾಗಲಿ ಎಂದು ಆಗ್ರಹಿಸಿದರು.
ಎಸ್ಎಫ್ಐ ರಾಜ್ಯಾಧ್ಯಕ್ಷ ಅನಂತ ನಾಯಕ್ ಮಾತನಾಡಿ, ನಗರದಲ್ಲಿ ಪ್ರಥಮ ದರ್ಜೆ ಕಾಲೇಜಿಗೆ ಸ್ವಂತ ಕಟ್ಟಡಕ್ಕಾಗಿ ವಿವಿಧ ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳ ಸಮ್ಮೇಳನ ನಡೆಸುತ್ತಿರುವುದು ನೋಡಿದರೆ ಶಿಕ್ಷಣದ ಬಗ್ಗೆ ಸರ್ಕಾರಕ್ಕೆ ಕಾಳಜಿ ಎಷ್ಟಿದೆ ಎಂಬುದನ್ನು ತೋರಿಸುತ್ತದೆ. ಆಳುವ ವರ್ಗದ ವಿರುದ್ಧ ಸಂಘರ್ಷಕ್ಕೆ ಮುಂದಾಗಬೇಕಿಗೆ ಎಂದರು.
ನಗರದ ಥಿಯೋಸಾಫಿಕಲ್ ಮಹಿಳಾ ಕಾಲೇಜಿನ ಪ್ರಾಚಾರ್ಯ ಪ್ರೊ ಯು. ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸಿದ್ದರು. ಹಂಪಿ ಕನ್ನಡ ವಿವಿ ಸಂಶೋಧಕ ಡಾ ಮಲ್ಲಿಕಾರ್ಜುನ ಮಾನ್ಪಡೆ, ಎಸ್ಎಫ್ಐ ಜಿಲ್ಲಾಧ್ಯಕ್ಷ ಬಿ. ಮಹೇಶ್, ಎಂ. ಗೋಪಾಲ್, ಕೆ. ಸುರೇಶ್ ಚವ್ಹಾನ್, ಟಿ. ಶರತ್ ಕುಮಾರ್, ವೈ. ಪಂಪಾನಂದ, ಎಸ್.ವಿ. ಅಜಯ್ ಕುಮಾರ್, ಭೀಮೇಶ್ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

