ಬಳ್ಳಾರಿ

ಭಾರತ ಸಂವಿಧಾನಗೌರವಿಸುವುದು ಎಲ್ಲರ ಕರ್ತವ್ಯ: ಜವರೇಗೌಡ

Published On :

ಕೂಡ್ಲಿಗಿ: ಪ್ರಜಾಪ್ರಭುತ್ವದಲ್ಲಿ ಸಂವಿಧಾನದಂತೆ ಕಾನೂನು ರೂಪಿಸಲಾಗಿದೆ. ಅದನ್ನು ಗೌರವಿಸಿ ನಡೆಯುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದು ತಹಸೀಲ್ದಾರ್ ಜವರೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ಕೂಡ್ಲಿಗಿ ಪಟ್ಟಣದ ಮಹದೇವ ಮೈಲಾರ ಕ್ರೀಡಾ ಂಗಣದಲ್ಲಿ ಶನಿವಾರ 64ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದ್ವಜಾರೋಹಣ ನೆರವೇರಿಸಿ ಅವರು ಮಾತನಾಡಿ, ಸಂವಿಧಾನದ ಚೌಕಟ್ಟಿನಲ್ಲಿ ದೇಶದ ಭದ್ರತೆ ಕಾಪಾಡುವಲ್ಲಿ ಎಲ್ಲರೂ ಕೈ ಜೋಡಿಸಬೇಕಿದೆ. ಹಲವು ಜಾತಿ, ಮತಗಳ ನಡುವೆ ದೇಶದ ಐಕ್ಯತೆ ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದರು.
ಪಪಂ ಅಧ್ಯಕ್ಷೆ ಖೈರೂನ್‌ಬೀ ಅಧ್ಯಕ್ಷತೆ ವಹಿಸಿದ್ದರು. ಪಪಂ ಉಪಾಧ್ಯಕ್ಷ ಎನ್. ನಾಗಜ್ಜ, ತಾಪಂ ಅಧ್ಯಕ್ಷೆ ಪ್ರಮೀಳಾ ಚಿದಾನಂದಗೌಡ, ಸದಸ್ಯರಾದ ಕಾವಲ್ಲಿ ಶಿವಪ್ಪನಾಯಕ, ಕೆ. ಈಶಪ್ಪ, ಗೌರಮ್ಮ, ಅಂಜಿನಪ್ಪ, ಗುರುನಾಯ್ಕ, ಜಿಪಂ ಸದಸ್ಯೆ ಮೀನಾಕ್ಷಮ್ಮ, ತಾಪಂ ಇಒ ಕೆ. ಸಣ್ಣವೀರಪ್ಪ, ಡಿಎಸ್‌ಎಸ್ ಸಂಚಾಲಕ ಎಸ್. ದುರುಗೇಶ್, ಕರವೇ ಅಧ್ಯಕ್ಷ ಕಾಟೇರ್ ಹಾಲೇಶ್, ದಲಿತ ಮುಖಂಡ ಮರಿಯಪ್ಪ, ಹಿರೇಕುಂಬಳಗುಂಟೆ ಟಿ. ಉಮೇಶ್, ಬಿಇಓ ಎಚ್.ಎಂ. ಮಲ್ಲಿಕಾರ್ಜುನಸ್ವಾಮಿ, ಸರ್ಕಾರಿ ಜೂನಿಯರ್ ಕಾಲೇಜು ಪ್ರಾಚಾರ್ಯ ಗೌಡ್ರು ಬಸವರಾಜ್, ಉಪಪ್ರಚಾರ್ಯ ಮಾರಪ್ಪ, ಹಿರೇಮಠ ಕಾಲೇಜು ಪ್ರಾಚಾರ್ಯ ಸಿದ್ಧರಾಮ ಹಿರೇಮಠ, ಅಧಿಕಾರಿಗಳು, ಗಣ್ಯರು ಇದ್ದರು. ಪಟ್ಟಣದಲ್ಲಿ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.