ಸದೃಢ ಭಾರತ ನಿರ್ಮಾಣಕ್ಕೆ ಬದ್ಧರಾಗಿ

Updated on: 

ಬಳ್ಳಾರಿ: ರಾಷ್ಟೀಯ ಏಕತೆ ಮತ್ತು ಭಾವೈಕ್ಯತೆ ಬೆಳೆಸಲು ಅನೇಕ ಮಹನೀಯರು ಸತತ ಪರಿಶ್ರಮ, ತ್ಯಾಗ ಬಲಿದಾನ ಮಾಡಿದ್ದಾರೆ. ಅವರನ್ನೆಲ್ಲ ನಾವಿಂದು ಸ್ಮರಿಸಿ, ಸದೃಢ ಭಾರತವನ್ನು ಕಟ್ಟಲು ಕಂಕಣ ಬದ್ಧರಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಕರೆ ನೀಡಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 64ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, ಸಹಕಾರ, ಸಹಬಾಳ್ವೆ ಮತ್ತು ಸೌಹಾರ್ದತೆ ನಮ್ಮೆಲ್ಲರ ಉಸಿರಾಗಬೇಕು. ದೇಶದ ಯುವಶಕ್ತಿಯ ಸದ್ಬಳಕೆಗಾಗಿ ಇಂದು ಅವಕಾಶಗಳನ್ನು ಒದಗಿಸುವುದು ಅತ್ಯಗತ್ಯವಾಗಿದೆ. ದುಷ್ಟ ಶಕ್ತಿಗಳನ್ನು ಧಮನ ಮಾಡಿ ವಿವಿಧತೆಯಲ್ಲೂ ಏಕತೆಯನ್ನು ಮೆರೆಯಬೇಕು. ದೇಶದ ರಕ್ಷಣೆ, ಆಂತರಿಕ ರಕ್ಷಣೆಗೆ ಎಲ್ಲರೂ ಸಹಕರಿಸಿ ಸದೃಢ ರಾಷ್ಟ್ರ ನಿರ್ಮಿಸಲು ಶ್ರಮಿಸಬೇಕು ಎಂದು ತಿಳಿಸಿದರು.     
ಬಂಧುತ್ವ ಭಾವನೆ ನಮ್ಮ ಗುರಿ: ದೇಶ ಪ್ರಜಾಪ್ರಭುತ್ವದ ಆಡಳಿತ ಪದ್ಧತಿಯನ್ನು ಅಳವಡಿಸಿಕೊಂಡ ಸಂಭ್ರಮದ ದಿನ ಇದಾಗಿದೆ. ಭಾರತದ ಸಂವಿಧಾನ ಶಿಲ್ಪಿ, ಮಹಾನ್ ಮಾನವತಾವಾದಿ, ಭಾರತರತ್ನ ಡಾ. ಬಾಬಾ ಅಂಬೇಡ್ಕರ್ ಅವರನ್ನು ಸದಾ ಸ್ಮರಿಸಲೇಬೇಕು. ಬ್ರಿಟಿಷ್ ಪಾರ್ಲಿಮೆಂಟರಿ ಪದ್ಧತಿಯನ್ನು ಅನುಸರಿಸಿದ ಭಾರತದ ಪ್ರಜಾಪ್ರಭುತ್ವಕ್ಕೆ ಅನೇಕ ಸವಾಲುಗಳು ಬಂದರೂ, ನಮ್ಮ ಪ್ರಜಾಪ್ರಭುತ್ಬದ ನೆಲೆಗಟ್ಟು ಅಲುಗಾಡದೆ ಗಟ್ಟಿಯಾಗಿ ನಿಂತಿದೆ. ದೇಶದ ಜನತೆಗೆ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಬಂಧುತ್ವ ಭಾವನೆ ಒದಗಿಸುವುದು ನಮ್ಮ ಗುರಿ ಎಂದರು.
ಪ್ರಗತಿಗೆ ಪ್ರಯತ್ನ: ಅಂರಾಷ್ಟ್ರೀಯ ಮಟ್ಟದಲ್ಲೂ ಭಾರತ ತನ್ನ ಹಿರಿಮೆಯನ್ನು ಮೆರೆಯುತ್ತಿದೆ. ಅನಕ್ಷರತೆ, ಅಜ್ಞಾನ, ಅನಾರೋಗ್ಯ, ಬಡತನ, ನಿರುದ್ಯೋಗವೆಂಬ ಶತ್ರುಗಳನ್ನು ಹೋಗಲಾಡಿಸಲು ನಾವೆಲ್ಲರೂ ಕಂಕಣಬದ್ಧರಾಗೋಣ ಎನ್ನುವ ಅಶಯ ನಮ್ಮದು. ರಾಜ್ಯದ ಪ್ರಗತಿಗಾಗಿ ರಾಜ್ಯ ಸರ್ಕಾರ ಯೋಜನೆ ರೂಪಿಸಿ ಪ್ರಗತಿಗೆ ಪ್ರಯತ್ನಿಸುತ್ತಿದೆ. ಸಾಮಾಜಿಕ ಭದ್ರತೆಗಾಗಿ ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಜನಪರ ಕಲ್ಯಾಣ ಕಾರ್ಯಕ್ರಮಗಳು, ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುಮಂಗಲಮ್ಮ ಗುಬಾಜಿ, ಸಂಸದೆ ಜೆ. ಶಾಂತಾ, ಕೆಎಂಎಫ್ ಅಧ್ಯಕ್ಷ ಜಿ. ಸೋಮಶೇಖರ ರೆಡ್ಡಿ, ವಿಧಾನಪರಿಷತ್ ಸದಸ್ಯ ಮೃತ್ಯುಂಜಯ ಜಿನಗಾ, ಮೇಯರ್ ಇಬ್ರಾಹಿಂಬಾಬು, ಉಪಮೇಯರ್ ಗೋವಿಂದರಾಜುಲು, ಬುಡಾ ಅಧ್ಯಕ್ಷ ವಿನೋದ್‌ಕುಮಾರ್, ಜಿಲ್ಲಾಧಿಕಾರಿ ಎ.ಎ. ಬಿಸ್ವಾಸ್, ಎಸ್ಪಿ ಡಾ. ಚಂದ್ರಗುಪ್ತ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ನಾಯ್ಕ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಬಾಬು, ಸಹಾಯಕ ಆಯುಕ್ತ ಶಶಿಕಾಂತ ಸೆಂಥಿಲ್ ಇತರರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com