ಬಳ್ಳಾರಿ

ದೂರ ಉಳಿದ ಜಿಪಂ ಉಪಾಧ್ಯಕ್ಷೆ, ಸದಸ್ಯ

Published On :




ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾಡಳಿತ ವತಿಯಿಂದ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿಯಲ್ಲಿ ಮಂಗಳವಾರ ನಡೆದ 104 ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ತಮ್ಮನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿ ಜಿಪಂ ಉಪಾಧ್ಯಕ್ಷೆ ಮಮತಾ ಸುರೇಶ್, ಸ್ಥಳೀಯ ಸದಸ್ಯ ಅನ್ನದಾನ ರೆಡ್ಡಿ ಕಾರ್ಯಕ್ರಮದಿಂದ ದೂರ ಉಳಿದಿದ್ದಾರೆ.
ಈ ಕುರಿತು 'ಕನ್ನಡಪ್ರಭ'ದೊಂದಿಗೆ ಮಾತನಾಡಿದ ಮಮತಾ ಸುರೇಶ್, ಪಾಪಿನಾಯಕನಹಳ್ಳಿ ಕ್ಷೇತ್ರದ ಜಿಪಂ ಸದಸ್ಯರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಹಾಕಿಲ್ಲ, ಅಲ್ಲದೆ ಅವರನ್ನು ಆಹ್ವಾನಿಸಿಲ್ಲ. ತಮಗೆ ಸೋಮವಾರ ಸಂಜೆ ಆಹ್ವಾನ ಪತ್ರಿಕೆ ನೀಡಿದ್ದಾರೆ. ಅಧಿಕಾರಿಗಳು ಜನಪ್ರತಿನಿಧಿಗಳನ್ನು ಕಡೆಗಣಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾವು ಹಾಗೂ ಅಲ್ಲಿನ ಜಿಪಂ ಸದಸ್ಯರು ಕಾರ್ಯಕ್ರಮದಿಂದ ದೂರು ಉಳಿದಿದ್ದೇವೆ.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಮನಕ್ಕೆ ತರಲಾಗಿದೆ. ಮುಂದಿನ ಜಿಪಂ ಸಾಮಾನ್ಯ ಸಭೆಯಲ್ಲಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.